ಡೆಹ್ರಾಡೂನ್: ಪ್ರವಾಸೋದ್ಯಮ ಕ್ಷೇತ್ರದ ಮೂರು ವಿಭಾಗಗಳಲ್ಲಿ ಉತ್ತರಾಖಂಡ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಗೆದ್ದಿದೆ.
Advertisement
ಶುಕ್ರವಾರ ಪ್ರವಾಸೋದ್ಯಮ ಸಮೀಕ್ಷೆ ಮತ್ತು ಪ್ರಶಸ್ತಿಗಳನ್ನು ವಿತರಿಸುವ ಕಾರ್ಯಕ್ರಮವನ್ನು ನವದೆಹಲಿಯಲ್ಲಿ ಆಯೋಜಿಸಲಾಯಿತು. ಈ ವೇಳೆ 9 ವಿಭಾಗಗಳಲ್ಲಿ ಭಾರತದ ಅತ್ಯುತ್ತಮ ಪ್ರವಾಸಿ ತಾಣಗಳಿಗೆ ವಿವಿಧ ಪ್ರಶಸ್ತಿಗಳನ್ನು ನೀಡಲಾಯಿತು. ಈ ಪೈಕಿ ಉತ್ತರಾಖಂಡಕ್ಕೆ ಅತ್ಯುತ್ತಮ ವನ್ಯಜೀವಿ ತಾಣ, ಅತ್ಯುತ್ತಮ ಸಾಹಸ ತಾಣ ಮತ್ತು ಅತ್ಯುತ್ತಮ ಆಧ್ಯಾತ್ಮಿಕ ತಾಣಕ್ಕೆ ಅತ್ಯುತ್ತಮ ರಾಷ್ಟ್ರೀಯ ಪ್ರಶಸ್ತಿಯನ್ನು ಲಭಿಸಿದೆ. ಇದನ್ನೂ ಓದಿ: ಬಾಗಿದ ಯೋಗಾನರಸಿಂಹ ಸ್ವಾಮಿ ಗೋಪುರದ ಕಳಶ – ಆತಂಕದಲ್ಲಿ ಭಕ್ತರು
Advertisement
ಈ ಪ್ರಶಸ್ತಿಯನ್ನು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಅವರು ಉತ್ತರಾಖಂಡದ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್ ಅವರಿಗೆ ನೀಡಿದರು. ಈ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದ ರೆಡ್ಡಿ ಅವರು, ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಗುರುತಿಸಿಕೊಳ್ಳಲು ಹಲವು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
Advertisement
Advertisement
ಈ ವೇಳೆ ಪ್ರಶಸ್ತಿ ಸ್ವೀಕರಿಸಿದ ನಂತರ ಉತ್ತರಾಖಂಡದ ಪ್ರವಾಸೋದ್ಯಮ ಸಚಿವ ಮಹಾರಾಜ್ ಮಾತನಾಡಿದ್ದು, ಕೊರೊನಾದಿಂದ ಉತ್ತರಾಖಂಡ ಪ್ರವಾಸೋದ್ಯಮವು ಕ್ಷೇಮ ಪ್ರವಾಸೋದ್ಯಮ ಮತ್ತು ಆಯುಷ್ ಕ್ಷೇತ್ರದಲ್ಲಿ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಿದೆ ಎಂದು ಖುಷಿಯನ್ನು ವ್ಯಕ್ತಪಡಿಸಿದರು.
ಉತ್ತರಾಖಂಡವು ತನ್ನ ನೈಸರ್ಗಿಕ ಸೌಂದರ್ಯದಿಂದ ಶತಮಾನಗಳಿಂದಲೂ ಭಾರತ ಮತ್ತು ವಿದೇಶಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ನಮ್ಮ ಉತ್ತರಾಖಂಡವು ಸಾಹಸ ಪ್ರವಾಸೋದ್ಯಮಕ್ಕೆ ಅಪಾರ ಸಾಮಥ್ರ್ಯವನ್ನು ಹೊಂದಿದೆ. ಈ ಪರಿಣಾಮ ಉತ್ತರಾಖಂಡ ಸಾಹಸ ಪ್ರಿಯರಿಗೆ ನೆಚ್ಚಿನ ಸ್ಥಳಗಳಲ್ಲಿ ಒಂದಾಗುತ್ತಿದೆ. ಸಾಹಸ ಕ್ರೀಡೆಗಳನ್ನು ಉತ್ತೇಜಿಸಲು ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಇತಿಹಾಸ ಬರೆದ ಪವರ್ ಸ್ಟಾರ್ ಪುಣ್ಯಸ್ಮರಣೆ- ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ
ನಾವು ಹೆಚ್ಚು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತೇವೆ. ನೌಕರರು ಮತ್ತು ಸ್ಥಳೀಯ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಯಾವಾಗಲೂ ಬದ್ಧವಾಗಿದೆ. ಅದರಲ್ಲಿಯೂ ಕೇದಾರನಾಥಕ್ಕೆ ಭೇಟಿ ನೀಡುವ ಭಕ್ತರಿಗೆ ಭವಿಷ್ಯದಲ್ಲಿ ಸೌಲಭ್ಯಗಳು ಸಿಗುವಂತೆ ಪ್ರಧಾನಿಗಳ ಮಾರ್ಗಸೂಚಿ ನೀಡಿದ್ದು, ಈ ಹಿನ್ನೆಲೆ ಕೇದಾರನಾಥದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದರು.