ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 11 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಮನಗರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರನ್ನು ಕಣಕ್ಕಿಳಿಸಲಿದೆ.
ರಾಜ್ಯದಲ್ಲಿ ಪಕ್ಷ ಪ್ರಚಾರದ ಮುಖ್ಯಸ್ಥರಾಗಿರುವ ಹರೀಶ್ ರಾವತ್ ಅವರು 2017ರ ವಿಧಾನಸಭಾ ಚುನಾವಣೆಯಲ್ಲಿ ಹರಿದ್ವಾರ-ಗ್ರಾಮೀಣ ಮತ್ತು ಕಿಚ್ಚ ವಿಧಾನಸಭಾ ಸ್ಥಾನಗಳಿಗೆ ಸ್ಪರ್ಧಿಸಿ ವಿಫಲರಾಗಿದ್ದರು.
Advertisement
Advertisement
ಲಾನ್ಸ್‌ಡೌನ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅನುಕೃತಿ ಗುಸೇನ್ ರಾವತ್ ಅವರನ್ನು ಕಣಕ್ಕಿಳಿಸಿದ್ದು, ಅನುಕೃತಿ ಅವರು ಬಿಜೆಪಿಯಿಂದ ಕಾಂಗ್ರೆಸ್‍ಗೆ ಮರಳಿದ ಹರಕ್ ಸಿಂಗ್ ರಾವತ್ ಅವರ ಸೊಸೆಯಾಗಿದ್ದಾರೆ. ಇದನ್ನೂ ಓದಿ: ಎರಡೂ ಡೋಸ್ ಲಸಿಕೆ ಪಡೆದ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ: ಬ್ರಿಟನ್ ಪ್ರಧಾನಿ
Advertisement
ಶನಿವಾರ ಕಾಂಗ್ರೆಸ್ ತನ್ನ 53 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿಯಲ್ಲಿ 64 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಕಳ್ಳನೆಂದು ಆಟೋ ಚಾಲಕನನ್ನು ಹೊಡೆದು ಕೊಂದ್ರು
Advertisement
ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ವಿಧಾನಸಭೆ ಚುನಾವಣೆ ಮೊದಲನೇ ಹಂತದಲ್ಲಿ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ.