ಉಡುಪಿ: ನಾನು ಕರ್ನಾಟಕಕ್ಕೆ ಬಂದ್ರೆ ಸಿದ್ದರಾಮಯ್ಯ ಹರಿಹಾಯೋದ್ಯಾಕೆ? ಅವರಿಗೇನು ಕಷ್ಟ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಶ್ನಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಬಿ.ಎಂ ಸುಕುಮಾರ್ ಶೆಟ್ಟಿ ಪರ ಪ್ರಚಾರ ನಡೆಸಲು ಬಂದಿದ್ದ ಸಂದರ್ಭ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು.
Advertisement
Advertisement
ಇಲ್ಲಿನ ರೈತ, ಯುವಕ, ಸಂಕಷ್ಟದಲ್ಲಿದ್ದಾನೆ. ಹಿಂದೂ ಯುವಕರಿಗೆ ರಕ್ಷಣೆಯಿಲ್ಲ ಹೀಗಾಗಿ ನಾನು ಅಲ್ಲಿಂದ ಇಲ್ಲಿಗೆ ಬರಬೇಕಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ತಿಳಿಸಿ ಇಲ್ಲಿನ ಜನರಿಗೆ ಮನವರಿಕೆ ಮಾಡಲು, ನಾನು ಪದೇ ಪದೇ ಕರ್ನಾಟಕಕ್ಕೆ ಬರುತ್ತೇನೆ ಅಂತ ಯೋಗಿ ಸವಾಲೆಸೆದಿದ್ದಾರೆ.
Advertisement
ಕರ್ನಾಟಕ ಸರ್ಕಾರ ಮಾಡದೇ ಇರೋದನ್ನು ಉತ್ತರ ಪ್ರದೇಶದಲ್ಲಿ ನಾನು ಸಾಧಿಸಿ ತೋರಿಸಿದ್ದೇನೆ. ಯುಪಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇನೆ, 12 ಲಕ್ಷ ಬಡವರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಎಲ್.ಪಿ.ಜಿ ಸಂಪರ್ಕ ನೀಡೋದರಲ್ಲೂ ನಾವು ಕರ್ನಾಟಕಕ್ಕಿಂತ ಮುಂದಿದ್ದೇವೆ. ವಿಕಾಸ ಸಿದ್ದರಾಮಯ್ಯ ಸರ್ಕಾರದ ಅಜೆಂಡಾ ಅಲ್ಲ. ಕರ್ನಾಟಕವನ್ನು ಕಾಂಗ್ರೆಸ್ ಪಕ್ಷದ ಎಟಿಎಂ ಮಾಡೋದೊಂದೇ ಅವರ ಅಜೆಂಡಾ ಎಂದು ವಾಗ್ದಾಳಿ ನಡೆಸಿದರು.
Advertisement
ಜಿಹಾದಿ ತತ್ವ ಪ್ರೋತ್ಸಾಹಿಸೋದು, ಬಿಜೆಪಿ ಕಾರ್ಯಕರ್ತರ ಕೊಲೆ ಮಾಡೋದು ಸಿದ್ದರಾಮಯ್ಯ ಅಜೆಂಡಾ. ಕರ್ನಾಟಕದಲ್ಲಿ ಹನುಮಜಯಂತಿ, ಶಿವಾಜಿ ಜಯಂತಿಗೆ ಅವಕಾಶ ಇಲ್ಲ. ಟಿಪ್ಪು ಜಯಂತಿ ಆಚರಿಸಲು ಈ ಸರ್ಕಾರಕ್ಕೆ ಇರುವ ಉತ್ಸಾಹ ಬೇರೆ ಯಾವ ವಿಚಾರದಲ್ಲೂ ಇಲ್ಲ ಎಂದರು.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಡಬ್ಬಲ್ ಎಂಜಿನ್ ಓಡಿಸಲು ಅಭಿವೃದ್ಧಿಯ ಗುರಿ ತಲುಪಲು ಬಿಜೆಪಿಯನ್ನು ಬೆಂಬಲಿಸಿ ಎಂದು ಯೋಗಿ ಕರೆ ನೀಡಿದ ಅವರು, ಮೀನುಗಾರರ, ರೈತರ ಹಿತ ಕಾಪಾಡಲು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ ಎಂದರು.