Bengaluru CityKarnatakaLatestLeading NewsMain PostNational

ಪ್ರಧಾನಿಗೂ ಮುನ್ನವೇ ಕರ್ನಾಟಕಕ್ಕೆ ಬರಲಿದ್ದಾರೆ ಸಿಎಂ ಯೋಗಿ

ಬೆಂಗಳೂರು: ಸೆಪ್ಟಂಬರ್‌ 2ರಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ್ಕೆ ಭೇಟಿ ನೀಡಲಿದ್ದಾರೆ. ಆದರೆ ಪ್ರಧಾನಿಗೂ ಮುನ್ನವೇ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ರಾಜ್ಯಕ್ಕೆ ಆಗಮಿಸಲಿದ್ದಾರೆ.

MODI_ YOGI

ಸೆಪ್ಟೆಂಬರ್ 1 ರಂದು ಸಿಎಂ ಯೋಗಿ ಆದಿತ್ಯನಾಥ್‌ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಅಂದು ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 11:55ಕ್ಕೆ ಎಸ್‌ಡಿಎಂ ಇನ್‌ಸ್ಟಿಟ್ಯೂಟ್‌ ಆಫ್‌ ನ್ಯಾಚುರೋಪತಿ ಅಂಡ್‌ ಯೋಗಿಕ್‌ ಸೈನ್ಸ್‌ ಕ್ಯಾಂಪಸ್‌ಗೆ ಭೇಟಿ ನೀಡಲಿದ್ದಾರೆ. ಸುಮಾರು 15 ನಿಮಿಷ ಕ್ಯಾಂಪಸ್ ವೀಕ್ಷಿಸಲಿದ್ದು, ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಜತೆ ಮಾತುಕತೆ ನಡೆಸಲಿದ್ದಾರೆ. ಇದನ್ನೂ ಓದಿ: ಕೋಲಾರ ಗಣೇಶೋತ್ಸವ – ರಾತ್ರಿ 10 ಗಂಟೆ ಬಳಿಕ ಮನರಂಜನಾ ಕಾರ್ಯಕ್ರಮಕ್ಕೆ ಅವಕಾಶವಿಲ್ಲ

ಮಧ್ಯಾಹ್ನ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಇನ್‌ಸ್ಟಿಟ್ಯೂಟ್‌ ಆಫ್ ನ್ಯಾಚುರೋಪತಿ ಅಂಡ್‌ ಯೋಗಿಕ್ ಸೈನ್ಸ್ ನ “ಕ್ಷೇಮವನ”ದ ಉದ್ಘಾಟನೆ ನೇರವೇರಿಲಿದ್ದು, ಬಳಿಕ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಉತ್ತರ ಪ್ರದೇಶಕ್ಕೆ ವಾಪಸ್ ತೆರಳಲಿದ್ದಾರೆ.

ಸೆಪ್ಟಂಬರ್‌ 2 ರಂದು ಮೋದಿ ಅಧಿಕೃತ ಸರ್ಕಾರಿ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಆಗಮಿಸಲಿದ್ದಾರೆ

Live Tv

Leave a Reply

Your email address will not be published.

Back to top button