ಲಕ್ನೋ: ಪತ್ನಿ ಹಾಗೂ ಮಕ್ಕಳು 500 ರೂ. ನೋಟುಗಳ ಜೊತೆ ಸೆಲ್ಫಿ ತೆಗೆದುಕೊಂಡು ಪರಿಣಾಮ ಇದೀಗ ಪೊಲೀಸ್ ಅಧಿಕಾರಿಯೊಬ್ಬರು ಫಜೀತಿಗೆ ಸಿಲುಕಿರುವ ಘಟನೆ ಉತ್ತರಪ್ರದೇಶದ ಉನ್ನಾವೋದಲ್ಲಿ ( Uttar Pradesh’s Unnao) ನಡೆದಿದೆ.
ಹೌದು. ಹೆಂಡ್ತಿ, ಮಕ್ಕಳು ಕಂತೆ ಕಂತೆ ನೋಟುಗಳ ಜೊತೆ ಸೆಲ್ಫಿ (SelfiE With 500 Rs. Notes) ತೆಗೆದುಕೊಂಡ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಈ ಬೆನ್ನಲ್ಲೇ ಠಾಣೆಯ ಉಸ್ತುವಾರಿಯಾಗಿದ್ದ ರಮೇಶ್ ಚಂದ್ರ ಸಹನಿಯನ್ನು (Ramesh Chandra Sahani) ತಕ್ಷಣ ಬೇರೆ ಕಡೆ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ಸ್ಟಾಲಿನ್ V/s ರವಿ ಸಂಘರ್ಷ- ವಿವಾದಾತ್ಮಕ ಆದೇಶ ವಾಪಸ್ ಪಡೆದ ಗವರ್ನರ್
Advertisement
Advertisement
ಫೋಟೋದಲ್ಲೇನಿದೆ..?: 500 ರೂ. ನೋಟಿನ ಬಂಡಲ್‍ಗಳನ್ನು ಮಂಚದ ಮೇಲೆ ನೀಟಾಗಿ ಜೋಡಿಸಿ ಅಧಿಕಾರಿಯ ಪತ್ನಿ ಮತ್ತು ಮಕ್ಕಳಿಬ್ಬರು ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ಫೋಟೋ ಶೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಆಕ್ರೋಶಗಳು ಕೇಳಿಬಂದಿವೆ. ಇದು ಭ್ರಷ್ಟ ವ್ಯವಸ್ಥೆಗೆ ಹಿಡಿದ ಕೈಗನ್ನಡಿ ಎಂಬ ಟೀಕೆಗಳು ಕೇಳಿಬಂದವು. ಸುಮಾರು 14 ಲಕ್ಷ ರೂ. ಮೌಲ್ಯದ ಹಣ ಕತೆಗಳೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
Advertisement
Advertisement
ಟೀಕೆಗಳು ಕೇಳಿಬಂದ ಬೆನ್ನಲ್ಲೇ ಅಧಿಕಾರಿಯನ್ನು ವರ್ಗಾವಣೆ ಮಾಡಿ ತನಿಖೆ ಆರಂಭಿಸಲಾಗಿದೆ. ತನಿಖೆಯ ವೇಳೆ, ಇದು 2021ರ ನವೆಂಬರ್ 14 ರಂದು ತಮ್ಮ ಕುಟುಂಬದ ಆಸ್ತಿ ಮಾರಾಟ ಮಾಡಿದಾಗ ಬಂದಂತಹ ಹಣವಾಗಿದೆ. ಈ ಹಣದ ಜೊತೆ ಮನೆಯವರು ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ಸಹನಿ ಸಮರ್ಥಿಸಿಕೊಂಡಿದ್ದಾರೆ.
ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಹನಿ ಅವರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.
Web Stories