ಪಾಟ್ನಾ: 75 ವರ್ಷಗಳ ಹಿಂದೆ ಭಾರತ ಬಿಟ್ಟು ಹೋಗಿದ್ದ ಬ್ರಿಟಿಷರು ಮತ್ತೆ ಬಿಜೆಪಿಯ ರೂಪದಲ್ಲಿ ಬಂದಿದ್ದಾರೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಉತ್ತರ ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಬೆಂಬಲ ನೀಡುತ್ತೇವೆ ಎಂದ ಅವರು, ಭಾರತೀಯ ಜನತಾ ಪಕ್ಷವು ನಡೆದುಕೊಳ್ಳುತ್ತಿರುವ ರೀತಿಯಿಂದಾಗಿ ಉತ್ತರ ಪ್ರದೇಶ ಚುನಾವಣೆಯಲ್ಲಿ ಸೋಲನ್ನು ಅನುಭವಿಸಲಿದೆ ಎಂದು ಭವಿಷ್ಯ ನುಡಿದರು.
Advertisement
Advertisement
ಬಿಜೆಪಿಯ ಹತಾಶೆ ಉತ್ತರ ಪ್ರದೇಶ ಚುನಾವಣೆಯಲ್ಲಿ ಸೋಲುತ್ತದೆ ಎನ್ನುವುದನ್ನು ತೋರಿಸುತ್ತದೆ. ದೇಗುಲಗಳಂತಹ ಸೂಕ್ಷ್ಮ ವಿಷಯದ ಮೇಲೆ ನಡೆದ ಗಲಭೆಗಳು ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ದೇಶವು ಅಂತರ್ಯುದ್ಧದತ್ತ ಸಾಗುತ್ತದೆ ಎನ್ನುವುದನ್ನು ತೋರುತ್ತಿದೆ. ಅವರು ಕೇವಲ ಗಲಭೆ ಮತ್ತು ದೇವಾಲಯಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಧರ್ಮ ಹೇಳಿದಂತೆ ಮೈತುಂಬ ಬಟ್ಟೆ ಹಾಕುವುದು ತಪ್ಪಾ: ರಾಯರೆಡ್ಡಿ ಪ್ರಶ್ನೆ
Advertisement
ಉತ್ತರ ಪ್ರದೇಶದ ಜನರು ಬಿಜೆಪಿಯ ಪ್ರಚಾರದಿಂದ ಬೇಸತ್ತಿದ್ದಾರೆ. ಪ್ರಧಾನಿ ಮೋದಿಯವರ ಆಡಳಿತದಲ್ಲಿ ದೇಶವು ಅಂತರ್ಯುದ್ಧದತ್ತ ಸಾಗುತ್ತಿದೆ. ಅವರು ಹಣದುಬ್ಬರ ಮತ್ತು ಬಡತನದ ಬಗ್ಗೆ ಮಾತನಾಡುತ್ತಿಲ್ಲ, ಆದರೆ ಅಯೋಧ್ಯೆ ಮತ್ತು ವಾರಣಾಸಿಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಶಿಕ್ಷಣ ಸಂಸ್ಥೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ: ಕಮಲ್ ಪಂತ್
Advertisement
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತಗಳ ಎಣಿಕೆ ನಡೆಯಲಿದೆ. ಪಶ್ಚಿಮ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯ ಮೊದಲ ಹಂತದ ಪ್ರಚಾರ ಮಂಗಳವಾರ ಸಂಜೆ ಮುಕ್ತಾಯಗೊಂಡಿದೆ.