ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಘೋರಖ್‍ಪುರ ನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಇದೇ ಮೊದಲ ಬಾರಿಗೆ ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಹಿರಿಯ ನಾಯಕರು ಭಾಗಿಯಾಗಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ಗೋರಖನಾಥ್ ದೇವಸ್ಥಾನದಲ್ಲಿ ಪೂಜೆ ನಡೆಯಿತು.
Advertisement
#WATCH | Accompanied by Union Home Minister Amit Shah, Uttar Pradesh CM Yogi Adityanath files nomination papers as a BJP candidate from Gorakhpur Urban Assembly constituency pic.twitter.com/BYzpDtVmlS
— ANI UP/Uttarakhand (@ANINewsUP) February 4, 2022
Advertisement
ಬಳಿಕ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಅಮಿತಾ ಶಾ, ಉತ್ತರ ಪ್ರದೇಶದಲ್ಲಿ ಯೋಗಿ ಗ್ಯಾಂಗ್‍ಗಳನ್ನು ನಿರ್ನಾಮ ಮಾಡಿದ್ದಾರೆ ಎಂದು ಹೇಳಲು ನನಗೆ ಹೆಮ್ಮೆಯಾಗುತ್ತಿದೆ. ಉತ್ತರ ಪ್ರದೇಶದಲ್ಲಿ ನ್ಯಾಯದ ಆಡಳಿತ ನಡೆಯುತ್ತಿದೆ. ಅವರು ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಿದ್ದಾರೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಕೊವೀಡ್‍ನಿಂದ ಕೆಲಸ ಕಳೆದುಕೊಂಡವರಿಗೆ ಚುನಾವಣೆ ಆಸರೆ
Advertisement
Union Home Minister & BJP leader Amit Shah and Uttar Pradesh CM Yogi Adityanath show victory sign at the public rally venue in Gorakhpur
CM Adityanath will file his nomination from Gorakhpur Urban Assembly constituency today. pic.twitter.com/2qAmq2fgnN
— ANI UP/Uttarakhand (@ANINewsUP) February 4, 2022
Advertisement
ಘೋರಖ್‍ಪುರ ಸಂಸದೀಯ ಕ್ಷೇತ್ರದಿಂದ ಐದು ಬಾರಿ ಸಂಸದರಿಗಾಗಿದ್ದ ಯೋಗಿ ಆದಿತ್ಯನಾಥ್ ಅವರನ್ನು ಕಳೆದ ಬಾರಿ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಆಯ್ಕೆ ಮಾಡಿತ್ತು. ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಪರಿಷತ್ ಮೂಲಕ ಆಯ್ಕೆಯಾಗಿ ಅವರು ಅಧಿಕಾರ ನಡೆಸಿದ್ದರು.