ಲಕ್ನೋ: ಭಾರತದ ಔಷಧೀಯ ಸಂಸ್ಥೆ ಮರಿಯನ್ ಬಯೋಟೆಕ್ (Marion Biotech) ತಯಾರಿಸುವ ಕೆಮ್ಮಿನ ಸಿರಪ್ (Cough Syrup) ಸೇವಿಸಿ ಉಜ್ಬೇಕಿಸ್ತಾನದ (Uzbekistan) ಕೆಲವು ಮಕ್ಕಳು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಔಷಧಿ ಮಾರಾಟ ಮಾಡುತ್ತಿದ್ದ ಮೂವರನ್ನು ನೋಯ್ಡಾ ಪೊಲೀಸರು (Noida Police) ಬಂಧಿಸಿದ್ದಾರೆ.
ಆರೋಪಿಗಳನ್ನು ಅತುಲ್ ರಾವತ್, ತುಹಿನ್ ಭಟ್ಟಾಚಾರ್ಯ ಮತ್ತು ಮೂಲ್ ಸಿಂಗ್ ಎಂದು ಗುರುತಿಸಲಾಗಿದ್ದು, ಮರಿಯನ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬಂಧಿಸಲಾಗಿದೆ. 1940ರ ಡ್ರಗ್ಸ್ ಆ್ಯಂಡ್ ಕಾಸ್ಮೆಟಿಕ್ಸ್ ಆಕ್ಟ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಗೌತಮ ಬುದ್ಧ ನಗರ 3ನೇ ಹಂತದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹರಿಯಾಣದ ಪ್ರತ್ಯೇಕ 3 ಕಡೆ ಭೀಕರ ಅಪಘಾತ – 17 ಮಂದಿ ದುರ್ಮರಣ
Advertisement
Advertisement
ಕಳೆದ ವರ್ಷ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಸೇವನೆಯಿಂದ ಉಜ್ಬೇಕಿಸ್ತಾನದಲ್ಲಿ 18 ಮಕ್ಕಳು ಮೃತಪಟ್ಟಿದ್ದರು.
Advertisement
ಪ್ರಕರಣ ವರದಿಯಾದ ಬಳಿಕ, ಮರಿಯನ್ ಬಯೋಟೆಕ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆ ತಯಾರಿಸಿರುವ ಅಬ್ರೊನಾಲ್ ಮತ್ತು ಡಾಕ್-1 ಮ್ಯಾಕ್ಸ್ ಕೆಮ್ಮು ಸಿರಪ್ ಅನ್ನು ಮಕ್ಕಳಿಗೆ ನೀಡದಂತೆ ವಿಶ್ವ ಆರೋಗ್ಯ ಸಂಸ್ಥೆ (WHO) ಸೂಚನೆ ನೀಡಿತ್ತು. ಇದನ್ನೂ ಓದಿ: ನನ್ನ ಕ್ರೀಡಾ ಜೀವನದ ಆರಂಭ ಸುಖಕರವಾಗಿರಲಿಲ್ಲ- ಬೆಳ್ಳಿ ಗೆದ್ದ ಸಹಾನಿ
Advertisement
ಉಜ್ಬೇಕಿಸ್ತಾನದ ಆರೋಗ್ಯ ಸಚಿವಾಲಯದ ಪರೀಶೀಲನೆಯಲ್ಲಿ ಕೆಮ್ಮಿನ ಸಿರಪ್‌ಗಳಲ್ಲಿ ಎಥಿಲೀನ್ ಗ್ಲೈಕೋಲ್‌ನ ವಿಷಕಾರಿ ರಾಸಾಯನಿಕ ಪತ್ತೆಯಾಗಿತ್ತು.