ಎಸ್‌ವಿಸಿ ಫಿಲ್ಮ್ಸ್ ಲಾಂಛನದಲ್ಲಿ ಎಂ.ಮುನೇಗೌಡ (M Munegowda) ಅವರು ನಿರ್ಮಿಸುತ್ತಿರುವ ಪ್ರೊಡಕ್ಷನ್ ನಂ.3 ಚಿತ್ರವನ್ನು ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ನಂತಹ ಸೂಪರ್ ಹಿಟ್ ಚಿತ್ರಗಳನ್ನ ನಿರ್ದೇಶಿಸಿರುವ ಚೇತನ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿರುವ ಈ ನೂತನ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಸಂಗೀತ ನೀಡಲಿದ್ದಾರೆ.
ಗಣೇಶ್, ಚೇತನ್ ಕುಮಾರ್ ಹಾಗೂ ವಿ.ಹರಿಕೃಷ್ಣ (V Harikrishna) ಅವರ ಕಾಂಬಿನೇಶನ್ ಅಂದ ಮೇಲೆ ಅಭಿಮಾನಿಗಳಿಗೆ ಹಾಡುಗಳ ಬಗ್ಗೆ ಸಾಕಷ್ಟು ನಿರೀಕ್ಷೆ ಇರುತ್ತದೆ. ವಿ.ಹರಿಕೃಷ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನೂತನ ಚಿತ್ರತಂಡ ವಿ.ಹರಿಕೃಷ್ಣ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದೆ. ಇದನ್ನೂ ಓದಿ: ಟೇಕಾಫ್ ವೇಳೆ ಅಮೆರಿಕದ ಸರಕು ಸಾಗಣೆ ವಿಮಾನ ಸ್ಫೋಟ – ಮೂವರು ದುರ್ಮರಣ
ಶಿವು ಗೌಡ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಈ ಚಿತ್ರದಲ್ಲಿ ಸಾಕಷ್ಟು ಅನುಭವಿ ಕಲಾವಿದರು ಅಭಿನಯಿಸಲಿದ್ದಾರೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಚಿತ್ರತಂಡ ನೀಡಲಿದೆ. ಇದನ್ನೂ ಓದಿ: ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನ ಆಗಿದೆ – ರಾಹುಲ್ ಗಾಂಧಿ ಹೊಸ ಬಾಂಬ್



