ಬೆಂಗಳೂರು: ವಿಧಾನಸಭಾ ಚುನಾವಣೆಗಾಗಿ ಟಿಕೆಟ್ ಆಕಾಂಕ್ಷಿಗಳು ತಮ್ಮ ಪಕ್ಷಗಳ ಬಾಗಿಲನ್ನು ನಿರಂತರವಾಗಿ ತಟ್ಟುತ್ತಿದ್ದಾರೆ. ಇತ್ತ ಬಿಜೆಪಿ ಸಹ ಇದೇ ತಿಂಗಳ ಎರಡನೇ ವಾರದಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ ಅಂತಾ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳು ಹೈಕಮಾಂಡ್ ನಾಯಕರ ಜೊತೆ ರಹಸ್ಯ ಮಾತುಕತೆಯನ್ನ ನಡೆಸುತ್ತಿದ್ದಾರೆ.
ಮಾಜಿ ಸಚಿವ ಹಾಗು ಬಿಜೆಪಿ ಮುಖಂಡ ವಿ.ಸೋಮಣ್ಣ ಮಾತ್ರ ತಮಗೆ ಯಾವ ಕ್ಷೇತ್ರದಿಂದ ಟಿಕೆಟ್ ಲಭಿಸಲಿದೆ ಎಂಬುದರ ಗೊಂದಲದಲ್ಲಿ ಇದ್ದಾರಂತೆ. ಈ ಹಿಂದೆ ಸೋಮಣ್ಣ ಹನೂರು ಕ್ಷೇತ್ರದಿಂದ ಸ್ಪರ್ಧೆಗೆ ಇಳಿಯಲಿದ್ದಾರೆ ಅಂತಾ ಹೇಳಲಾಗಿತ್ತು. ಆದ್ರೆ ನಂತರ ಗುಂಡ್ಲುಪೇಟೆ ಕ್ಷೇತ್ರದಿಂದ ಟಿಕೆಟ್ ಸಿಗಲಿದೆ ಎಂಬ ಸುದ್ದಿಯೊಂದು ಬಿಜೆಪಿ ಅಂಗಳದಲ್ಲಿ ಕೇಳಿ ಬಂದಿತ್ತು. ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಹನೂರು ಕ್ಷೇತ್ರವೇ ಫಿಕ್ಸ್ ಅಂತಾ ಸಹ ತಿಳಿದು ಬಂದಿತ್ತು. ಇದನ್ನೂ ಓದಿ: ಹನೂರು ಕ್ಷೇತ್ರದಿಂದಲೇ ಸ್ವರ್ಧಿಸುವ ಬಯಕೆ, ಯಾವುದೇ ಷರತ್ತು ಇಲ್ಲದೇ ಪರಿಮಳಾ ನಾಗಪ್ಪ ಪಕ್ಷಕ್ಕೆ ಬರಲಿ: ಮಾಜಿ ಸಚಿವ ವಿ.ಸೋಮಣ್ಣ
Advertisement
Advertisement
ಭಾನುವಾರ ಕೇಂದ್ರ ಸಚಿವ ಅನಂತಕುಮಾರ್ ಮನೆಯಲ್ಲಿ ನಡೆದ ಸಭೆಯಲ್ಲಿ ಸೋಮಣ್ಣ ಅವರನ್ನು ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಿಂದ ಕಣಕ್ಕೆ ಇಳಿಯುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ನಿಮಗೆ ಇನ್ನು 4 ವರ್ಷ ಪರಿಷತ್ ಸದಸ್ಯ ಸ್ಥಾನ ಇದೆ. ನಮ್ಮ ಸರ್ಕಾರ ಬಂದ್ರೆ ಸಚಿವರಾಗುವುದು ಗ್ಯಾರೆಂಟಿ, ನೀವು ಗೋವಿಂದರಾಜನಗದಲ್ಲಿ ಸ್ಪರ್ಧೆ ಮಾಡಿ, ಇಲ್ಲ ಈ ಎಲೆಕ್ಷನ್ ನಲ್ಲಿ ಸುಮ್ಮನಿದ್ದು ಬಿಡಿ ಎಂದ ಅನಂತಕುಮಾರ್ ಹೇಳಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಚುನಾವಣಾ ಪೂರ್ವ ಸರ್ವೆ ಬಿಜೆಪಿಗೆ ಎಚ್ಚರಿಕೆ ಗಂಟೆ: ವಿ.ಸೋಮಣ್ಣ
Advertisement
ಅನಂತಕುಮಾರ್ ಅವರು ನೀಡಿದ ಸಲಹೆಯನ್ನು ಸೋಮಣ್ಣ ಬಹುತೇಕ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇತ್ತ ಇನ್ನೇರೆಡು ದಿನಗಳಲ್ಲಿ ಚುನಾವಣೆ ಸ್ಪರ್ಧೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇನೆ ಅಂತಾ ಸೋಮಣ್ಣ ಹೈಕಮಾಂಡ್ ಗೆ ತಿಳಿಸಿದ್ದಾರೆ ಎಂದು ಪಬ್ಲಿಕ್ ಟಿವಿ ಮೂಲಗಳು ತಿಳಿಸಿವೆ.