ಬೆಂಗಳೂರು: ಈ ಚುನಾವಣೆಯಲ್ಲಿ ಫೋರ್, ಸಿಕ್ಸ್ ಹೊಡೆಯಲು ಹೋಗಿ ಬೌಲ್ಡ್ ಆಗಿದ್ದೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ (V.Somanna) ಹೇಳಿದ್ದಾರೆ.
ಬೆಂಗಳೂರಿನ (Bengaluru) ಬಿಜೆಪಿ (BJP) ಕಚೇರಿಯಲ್ಲಿ ಭಾನುವಾರ ಮಾತಾಡಿದ ಅವರು, ನಾನು ಸನ್ಯಾಸಿ ಅಲ್ಲ. ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದೇನೆ. ಪಕ್ಷ ಏನು ತೀರ್ಮಾನ ಮಾಡುತ್ತದೆ ಎಂದು ನೋಡಬೇಕು. ನಾನು ಪಕ್ಷ ಹೇಳಿದ ಕೆಲಸ ಮಾಡಿದ್ದೇನೆ. ಎಂಥಹ ಸಂದರ್ಭದಲ್ಲೂ ವಿಚಲಿತನಾಗಿಲ್ಲ. ಪಕ್ಷ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ. ಇಲ್ಲದಿದ್ದರೆ ಬೇಸರ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: 3 ವರ್ಷದ ಹಿಂದಿನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ – ಮಹಿಳೆಯ ಅಸ್ತಿಪಂಜರ ಸೆಪ್ಟಿಕ್ ಟ್ಯಾಂಕ್‍ನಲ್ಲಿ ಪತ್ತೆ
ಪಕ್ಷ ಕೊಟ್ಟಿರುವ ಟಾಸ್ಕ್‌ಗಳನ್ನು ತಲೆ ಮೇಲೆ ಹೊತ್ತು ಮಾಡಿದ್ದೇನೆ. ಇಲ್ಲಿಯವರೆಗೂ 12 ಚುನಾವಣೆಗಳನ್ನು ನೋಡಿದ್ದೇನೆ. 7 ರಿಂದ 8 ಉಪಚುನಾವಣೆಗಳಲ್ಲಿ ಕೆಲಸ ಮಾಡುವ ಅವಕಾಶವನ್ನು ಪಕ್ಷ ಕೊಟ್ಟಿದೆ. ಆದರೆ ಕಳೆದ ಒಂದೂವರೆ ತಿಂಗಳಿಂದ ನಿರುದ್ಯೋಗಿಯಾಗಿ ಕುಳಿತಿದ್ದೇನೆ ಎಂದಿದ್ದಾರೆ.
ನನ್ನ ಕ್ಷೇತ್ರ ಗೋವಿಂದರಾಜನಗರದಲ್ಲಿ ನನ್ನ ಅವಧಿಯಲ್ಲಿ ಮೂಲ ಸೌಕರ್ಯ ನೀಡಿ ಅಭಿವೃದ್ಧಿ ಮಾಡಿದ್ದೇನೆ. ಒಬ್ಬ ರಾಜಕಾರಣಿಯಾಗಿ ಪಕ್ಷದ ಸಂದೇಶವನ್ನು ಕ್ಷೇತ್ರದಲ್ಲಿ ತಲುಪಿಸಿದ್ದೇನೆ. ಪಕ್ಷಕ್ಕಿಂತ ಯಾರೂ ದೊಡ್ಡವರಿಲ್ಲ. ಅದಕ್ಕಾಗಿ ಪಕ್ಷ ಕೊಟ್ಟ ಕೆಲಸ ಚಾಚೂ ತಪ್ಪದೇ ಮಾಡಬೇಕಾಗುತ್ತದೆ. ಚಿಂಚೋಳಿ ಉಪಚುನಾವಣೆ ವೇಳೆ ನೆತ್ತಿ ಸುಡುವ ಬಿಸಿಲಿನಲ್ಲಿ ಕೆಲಸ ಮಾಡಿದ್ದೇನೆ. ನನ್ನ ಜೊತೆ ಎಮ್‍ಎಲ್‍ಸಿ ರವಿಕುಮಾರ್‌ನನ್ನು ಮಾತ್ರ ಪಕ್ಷ ಕಳಿಸಿತ್ತು. ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿ, ಅಭ್ಯರ್ಥಿಯನ್ನೂ ಗೆಲ್ಲಿಸಿದೆ ಎಂದಿದ್ದಾರೆ.
ಚಿಂಚೋಳಿ ಫಲಿತಾಂಶ ರಾಜ್ಯಕ್ಕೆ ಒಂದು ದೊಡ್ಡ ಸಂದೇಶ ತಂದುಕೊಟ್ಟಿತ್ತು. ಅದೇ ಸಂದರ್ಭದಲ್ಲಿ ಕುಂದಗೋಳ ಉಪಚುನಾವಣೆಯಲ್ಲಿ ಸೋತಿದ್ದೆವು. ಪ್ರತಿಫಲ ಬಯಸಿ ಕೆಲಸ ಮಾಡಬಾರದು. ನಮ್ಮೆಲ್ಲರಿಗಿಂತ ದೊಡ್ಡವರು ಈ ದೇಶಕ್ಕೆ ಸಮರ್ಪಣೆ ಮಾಡಿಕೊಂಡಿದ್ದಾರೆ. ಯಾರ ಜೊತೆಗೂ ರಾಜೀ ಮಾಡಿಕೊಳ್ಳದೇ ಪಕ್ಷದ ಕೆಲಸ ಮಾಡಬೇಕು. ಆದರೆ ಕೆಲವು ವಿಚಾರಗಳ ಬಗ್ಗೆ ಮಾತಾಡಿದರೆ ಕೆಲವರಿಗೆ ತಪ್ಪಾಗಿ ಕಾಣಿಸುತ್ತದೆ ಎಂದಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ವಿಚಾರ ಚರ್ಚೆಗೆ ಬರುತ್ತಿದ್ದಂತೆ, ವರಿಷ್ಠರ ಗಮನ ಸೆಳೆಯುವ ಪ್ರಯತ್ನಕ್ಕೆ ಸೋಮಣ್ಣ ಮುಂದಾಗಿದ್ದಾರೆ. ಅದಕ್ಕಾಗಿ ಸಭೆಗಳಲ್ಲಿ ಕಾಣಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ. ಇದನ್ನೂ ಓದಿ: ಲೇಡಿಸ್ ಪಿಜಿಗಳೇ ಟಾರ್ಗೆಟ್ – ಸ್ನಾನ ಮಾಡುವುದನ್ನು ಕದ್ದುಮುಚ್ಚಿ ವೀಡಿಯೋ ಮಾಡುತ್ತಿದ್ದಾಗಲೇ ಕಿರಾತಕ ಲಾಕ್