ತುಮಕೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ (V Somanna) ಅವರು ನವದೆಹಲಿಯಲ್ಲಿಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಅವರನ್ನು ಭೇಟಿ ಮಾಡಿ ತುಮಕೂರು ರೈಲ್ವೆ ನಿಲ್ದಾಣಕ್ಕೆ (Tumakuru Railway Station) ಡಾ ಶ್ರೀ ಶಿವಕುಮಾರ ಸ್ವಾಮೀಜಿ (Siddaganga Shree) ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.
ತುಮಕೂರು ಜಿಲ್ಲೆಯ ಅಭಿವೃದ್ಧಿ ಕುರಿತು ವಿಶೇಷ ಪ್ರಸ್ತಾವನೆಯನ್ನು ಪ್ರಧಾನಮಂತ್ರಿಗಳಿಗೆ ಸಲ್ಲಿಸಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಭಾಗಿ
Advertisement
Advertisement
ತುಮಕೂರು ಜಿಲ್ಲೆಯ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರ ಸಚಿವಾಲಯದಿಂದ 87 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಮೂಲಕ ಇಲಾಖೆಯ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಅತ್ಯಂತ ಸಹಕಾರ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಅಭಿನಂದನೆ ಸಲ್ಲಿಸಿ, ತುಮಕೂರು, ರಾಯದುರ್ಗ ಮತ್ತು ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಮಾರ್ಗವನ್ನು 2027ರ ಜೂನ್ ಮಾಹೆಯಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆ ಮತ್ತು ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ದನದ ಕೊಟ್ಟಿಗೆ ಶುಚಿಗೊಳಿಸಿ ಅಲ್ಲಿ ಮಲಗಿದರೆ ಕ್ಯಾನ್ಸರ್ ರೋಗ ವಾಸಿಯಾಗುತ್ತೆ: ಉತ್ತರ ಪ್ರದೇಶ ಸಚಿವ
Advertisement