– ಬೆಂಗಳೂರು-ತುಮಕೂರು-ಅರಸಿಕೆರೆ ಮಾರ್ಗಕ್ಕೆ ಬರಲಿದೆ ಆಟೋಮೆಟಿಕ್ ರೈಲ್ವೆ ಸಿಗ್ನಲ್
ತುಮಕೂರು: ನಗರದ ರೈಲು ನಿಲ್ದಾಣದಿಂದ ಮುಂದಿನ ಹದಿನೈದು ದಿನಗಳಲ್ಲಿ ಹೊಸದಾಗಿ ಮೆಮು ರೈಲು (Memu Express Train) ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ (V Somanna) ಇಲ್ಲಿ ತಿಳಿಸಿದರು.
ರಾಜ್ಯದಲ್ಲಿ ಹೊಸದಾಗಿ ಮೂರು ಮೆಮು ರೈಲು ಆರಂಭವಾಗಲಿದ್ದು, ಇದರಲ್ಲಿ ಒಂದು ತುಮಕೂರು ನಿಲ್ದಾಣದಿಂದ (Tumkur Railway Station) ಶುರುವಾಗಲಿದೆ. ನಗರದಿಂದ ಬೆಳಗ್ಗೆ 9 ಗಂಟೆಗೆ ಹೊರಟು 10ಕ್ಕೆ ಬೆಂಗಳೂರಿನ ಯಶವಂತಪುರ ನಿಲ್ದಾಣ ತಲುಪಲಿದೆ. ಸಂಜೆ 6 ಗಂಟೆಗೆ ಯಶವಂತಪುರದಿಂದ ಹೊರಟು ಸಂಜೆ 7 ಗಂಟೆಗೆ ನಗರಕ್ಕೆ ಬರಲಿದೆ. ಇದರಲ್ಲಿ 1,500 ಜನ ಪ್ರಯಾಣಿಸಬಹುದು ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
Advertisement
Advertisement
ರೈಲ್ವೆ ಮಾರ್ಗದ ಸಾಮರ್ಥ್ಯ ಹೆಚ್ಚಿಸಿ ಬೆಂಗಳೂರು-ತುಮಕೂರು-ಅರಸಿಕೆರೆ ಮಾರ್ಗದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ ಆಟೋಮೆಟಿಕ್ ರೈಲ್ವೆ ಸಿಗ್ನಲ್ ಅಳವಡಿಸುವ ಯೋಜನೆಗೆ ಮಂಜೂರಾತಿ ನೀಡಲಾಗಿದೆ. ಬೆಂಗಳೂರು-ತುಮಕೂರು ಭಾಗದ ಮುಂದಿನ 30 ವರ್ಷಗಳ ಬೆಳವಣಿಗೆ ದೃಷ್ಟಿಯಲ್ಲಿ ಇಟ್ಟುಕೊಂಡು ಯೋಜನೆ ರೂಪಿಸಲಾಗಿದೆ. ಇದರಿಂದ ರೈಲುಗಳ ಓಡಾಟ ಸುಲಭವಾಗುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಟ್ರೈನಿ ವೈದ್ಯೆ ಅತ್ಯಾಚಾರ & ಹತ್ಯೆ ಕೇಸ್; ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ
Advertisement
ʻಅಮೃತ್ ಭಾರತ್ʼ ಯೋಜನೆಯಡಿ ರಾಜ್ಯದ 61 ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ನಗರದ ನಿಲ್ದಾಣಕ್ಕೆ 118 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಈಗಾಗಲೇ ಗುಬ್ಬಿ ನಿಲ್ದಾಣದ ಆಧುನೀಕರಣಕ್ಕೆ 7.50 ಕೋಟಿ ರೂ., ಹಾಸನದ ಶ್ರವಣಬೆಳಗೊಳ ನಿಲ್ದಾಣಕ್ಕೆ 9 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಹತ್ತಿರ ಸೈವಾಕ್ ನಿರ್ಮಾಣ ಕಾರ್ಯ ಒಂದು ತಿಂಗಳಲ್ಲಿ ಆರಂಭವಾಗಲಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಪೊಲಿಟಿಕಲ್ ಸೇಫ್ – ಆದ್ರೆ ಮುಂದೇನು?