ರಾಜ್ಯದಲ್ಲೇ ಮೊದಲು- ವಾರ್ತಾಧಿಕಾರಿಗಳಿಂದ ಗಡಿ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ

Public TV
1 Min Read
bdr grama vastavya 2

ಬೀದರ್: ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಗಳ ವಾರ್ತಾಧಿಕಾರಿಗಳು ಪ್ರತಿ ತಿಂಗಳು 2 ಗ್ರಾಮಗಳಲ್ಲಿ ವಾಸ್ತವ್ಯ ಹೂಡಬೇಕು ಎಂದು ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಬೀದರ್ ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ.

ಗ್ರಾಮದ ಹೈಸ್ಕೂಲ್‍ನ ಆವರಣದಲ್ಲಿ ವಾರ್ತಾಧಿಕಾರಿ ಜೊತೆಗೆ ವಾರ್ತಾ ಇಲಾಖೆಯ ಮೂವರು ಸಿಬ್ಬಂದಿ ಮತ್ತು ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾ ತಂಡಗಳ 11 ಜನ ಕಲಾವಿದರು ಕೂಡ ವಾಸ್ತವ್ಯ ಮಾಡಿದ್ದಾರೆ. ರಾಜ್ಯ ಸರ್ಕಾರವು ಆದೇಶ ಹೊರಡಿಸಿದ ಬಳಿಕ ಇಡೀ ರಾಜ್ಯದಲ್ಲೇ ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಕರ್ನಾಟಕದ ಕಿರೀಟ ಎಂದೇ ಹೆಸರಾದ ಬೀದರನಿಂದಲೇ ಮೊಟ್ಟ ಮೊದಲನೇ ಬಾರಿಗೆ ಆರಂಭವಾಗುತ್ತಿರುವುದು ವಿಶೇಷವಾಗಿದೆ.

bdr grama vastavya

ಈ ಗ್ರಾಮ ವಾಸ್ತವ್ಯ ವಿಶೇಷ ಕಾರ್ಯಕ್ರಮಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಸ್.ಎನ್ ಸಿದ್ದರಾಮಪ್ಪ ಅವರು ಹಸಿರು ನಿಶಾನೆ ತೋರುವ ಮೂಲಕ ಶನಿವಾರ ವಿದ್ಯುಕ್ತ ಚಾಲನೆ ನೀಡಿದರು. ಸರ್ಕಾರದ ವಿವಿಧ ಇಲಾಖೆಗಳ ಜನಕಲ್ಯಾಣ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳು, ಯೋಜನೆಗಳ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಾರ್ತಾಧಿಕಾರಿಗಳು ಈ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

bdr grama vastavya 1

ಇನ್ನು ಮುಂದೆ ಪ್ರತಿ ತಿಂಗಳು ಎರಡು ಗ್ರಾಮಗಳಲ್ಲಿ ನಡೆಯಲಿರುವ ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಸ್ಥಳೀಯ ಗ್ರಾಮ ಪಂಚಾಯ್ತಿ, ಸಂಘ-ಸಂಸ್ಥೆಗಳ ಸದಸ್ಯರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *