ತುಮಕೂರು: ಶ್ರೀಗಳ ಆರೋಗ್ಯ ಏರುಪೇರು ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದ ಶಾಲಾ-ಕಾಲೇಜುಗಳಿಗೆ ರಜೆ ಫೋಷಣೆ ಮಾಡಲಾಗಿದೆ.
ಈಗಾಗಲೇ ವೈದ್ಯರು ಶ್ರೀಗಳ ಆರೋಗ್ಯವನ್ನು ಪರಿಶೀಲನೆ ನಡೆಸಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಮಕ್ಕಳು ಮತ್ತು ಭಕ್ತರು ಮಠಕ್ಕೆ ಬಂದಿದ್ದಾರೆ. ಆದ್ದರಿಂದ ಮುಂಜಾಗೃತಾ ಕ್ರಮವಾಗಿ ಮಠದ ಶಾಲಾ-ಕಾಲೇಜುಗಳಿಗೆ ರಜೆ ಫೋಷಣೆ ಮಾಡಿದ್ದಾರೆ. ತಮ್ಮ ಮುಂದಿನ ಆದೇಶವರೆಗೂ ಈ ಫೋಷಣೆ ಮುಂದುವರಿಯುತ್ತದೆ ಎಂದು ಮಠದ ಅಧಿಕಾರಿ ಹೇಳಿದ್ದಾರೆ.
Advertisement
Advertisement
ಇತ್ತ ಸ್ವಯಂ ಪ್ರೇರಿತರಾಗಿ ಅಂಗಡಿ ಬಾಗಿಲು ಹಾಕುತ್ತಿದ್ದಾರೆ. ಈಗಾಗಲೇ ಹೆದ್ದಾರಿಯಲ್ಲಿ ಬರುವ ಕೆಲವೊಂದು ಅಂಗಡಿಗಳನ್ನು ಮಾಲೀಕರು ಸ್ವಯಂ ಬಂದ್ ಮಾಡಿದ್ದಾರೆ. ಶ್ರೀಗಳ ಆರೋಗ್ಯದ ಬಗ್ಗೆ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಶ್ರೀಗಳ ಆರೋಗ್ಯದಲ್ಲಿ ಏರುಪೇರು ಎಂಬ ವಿಷಯ ತಿಳಿದ ತಕ್ಷಣ ಗಣ್ಯಾತೀಗಣ್ಯರು ಸಿದ್ದಗಂಗಾ ಮಠಕ್ಕೆ ಬಂದಿದ್ದರು. ಈಗ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಂದಿದ್ದು, ಎಲ್ಲರೂ ಸೇರಿ ತುರ್ತು ಸಭೆ ನಡೆಸುತ್ತಿದ್ದಾರೆ.
Advertisement
Advertisement
ಇನ್ನೂ ಮಠದ ಸುತ್ತಮುತ್ತ ಸರ್ಪಗಾವಲಿನಲ್ಲಿ ಪೊಲೀಸರು ಭದ್ರತೆಯನ್ನು ಆಯೋಜನೆ ಮಾಡಿದ್ದಾರೆ. ಸದ್ಯಕ್ಕೆ ಕಿರಿಯ ಸ್ವಾಮೀಜಿ, ಮಠದ ಅಧಿಕಾರಿಗಳು, ವೈದ್ಯರು ಮತ್ತು ಗಣ್ಯರು ಸೇರಿದಂತೆ ಸಿಎಂ ಕುಮಾರಸ್ವಾಮಿ ಜೊತೆ ತುರ್ತು ಸಭೆ ನಡೆಸುತ್ತಿದ್ದಾರೆ. ಬಳಿಕ ಶ್ರೀಗಳ ಆರೋಗ್ಯದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ತಿಳಿಸುವ ಸಾಧ್ಯತೆ ಇದೆ. ವೈದ್ಯರು ಕೂಡ ಮಧ್ಯಾಹ್ನ 2 ಗಂಟೆ ಶ್ರೀಗಳ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv