ಮೋದಿ ಜನ್ಮದಿನದಂದು 2 ಕೋಟಿ ಮಂದಿಗೆ ಕೋವಿಡ್ ಲಸಿಕೆ

Public TV
2 Min Read
modi 2

ನವದೆಹಲಿ: ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಶುಕ್ರವಾರ ಹೊಸ ಮೈಲುಗಲ್ಲು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಇಂದು ದೇಶಾದ್ಯಂತ ದಾಖಲೆಯ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

ಮೋದಿಯವರ ಜನ್ಮದಿನದಂದು ದೇಶಾದ್ಯಂತ ಎರಡು ಕೋಟಿ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಈ ಮುಂಚೆ ತಿಳಿಸಿದ್ದವು. ಇದನ್ನೂ ಓದಿ:  ಕತ್ತೆ ಅಂತ ಕರೆದು ವಿವಾದ – ಶಶಿ ತರೂರ್ ಕ್ಷಮೆಯಾಚಿಸಿದ ಕಾಂಗ್ರೆಸ್ ಮುಖ್ಯಸ್ಥ

ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರ ಪರವಾಗಿ ಪ್ರಧಾನಿಗೆ ಇದು ಉಡುಗೊರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು, ಭಾರತವು ಒಂದೇ ದಿನದಲ್ಲಿ ಎರಡು ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:  1 ಸಾಲಿನಲ್ಲಿ ಪ್ರಧಾನಿಗೆ ವಿಶ್ ಮಾಡಿದ ರಾಹುಲ್ ಗಾಂಧಿ

ಕೋ-ವಿನ್ ಪೋರ್ಟಲ್‌ನ ಮಾಹಿತಿಯ ಪ್ರಕಾರ, ಶುಕ್ರವಾರ ಸಂಜೆ 5.27ರ ವರೆಗೆ ದೇಶದಲ್ಲಿ 2,03,68,343 ಲಸಿಕೆ ವಿತರಣೆ ಮಾಡಲಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಲಸಿಕೆ ವಿತರಣೆ ಸಂಖ್ಯೆ 78.72 ಕೋಟಿ ಡೋಸ್ ತಲುಪಿದೆ. ಇದನ್ನೂ ಓದಿ:  ಕಟೌಟ್ ಡ್ರೆಸ್‍ನಲ್ಲಿ ನೋರಾ ಫತೇಹಿ ಸಖತ್ ಹಾಟ್

ಇದಕ್ಕು ಮುನ್ನ ಭಾರತೀಯ ಜನತಾ ಪಕ್ಷ(ಬಿಜೆಪಿ) ಪ್ರಧಾನಿ ಮೋದಿಯವರ ಹುಟ್ಟುಹಬ್ಬದಂದು ದೇಶದಲ್ಲಿ ಗರಿಷ್ಠ ಸಂಖ್ಯೆಯ ಕೋವಿಡ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆ ಸೃಷ್ಟಿಸುವುದಾಗಿ ಹೇಳಿತ್ತು ಎಂದು ಮೂಲಗಳು ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *