ನವದೆಹಲಿ: ದೇಶದಲ್ಲಿ 15ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಇಂದಿನಿಂದ ಆರಂಭವಾಗಲಿದೆ. ಇದಕ್ಕಾಗಿ ಕೇಂದ್ರ ಆರೋಗ್ಯ ಇಲಾಖೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ.
ಸರ್ಕಾರದ ಕೋವಿನ್ ಪೋರ್ಟಲ್‌ನಲ್ಲಿ ಈಗಾಗಲೇ 8 ಲಕ್ಷ ಮಕ್ಕಳು ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಅವರಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುವುದು. ಇದನ್ನೂ ಓದಿ: ಅತ್ತೆಯನ್ನು ಕೊಂದು, ಮೃತ ದೇಹಕ್ಕೆ ಬೆಂಕಿ ಹಚ್ಚಿದ ಸೊಸೆ
Advertisement
Advertisement
ಶಾಲೆಗಳೊಂದಿಗೆ ಸಮಾಲೋಚನೆ ನಡೆಸಿ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ಲಸಿಕಾ ಕಾರ್ಯಕ್ರಮ ನಡೆಸಲಾಗುವುದು. ಹೆಚ್ಚಿನ ಸಂಖ್ಯೆಯ ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳನ್ನು ಲಸಿಕೆ ಕೇಂದ್ರಗಳಾಗಿಯೂ ಬಳಸಲಾಗುತ್ತಿದೆ.
Advertisement
2007ನೇ ಇಸವಿ ಅಥವಾ ಅದಕ್ಕಿಂತಲೂ ಮೊದಲು ಜನಿಸಿರುವ ಮಕ್ಕಳು ಕೋವಿಡ್ ಲಸಿಕೆ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ. ಕೋವ್ಯಾಕ್ಸಿನ್ ಲಸಿಕೆಯನ್ನು ಮಾತ್ರ ಮಕ್ಕಳಿಗೆ ನೀಡಲಾಗುವುದು. ಲಸಿಕೆಯ ಡೋಸ್‌ಗಳನ್ನು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಬಹುಕಾಲದ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಡೆಸಿದ ಅನಿವಾಸಿ ಕನ್ನಡಿಗರ ಅಭಿಯಾನ ಯಶಸ್ವಿ
Advertisement
ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲು ರಾಜ್ಯದಲ್ಲೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಲಸಿಕೆಯ 16 ಲಕ್ಷ ಡೋಸ್ ಸಂಗ್ರಹವಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.
ಮೊಬೈಲ್ ಮೂಲಕ ನೋಂದಣಿ:
ಮಕ್ಕಳ ಪರವಾಗಿ ಪೋಷಕರು ಅಥವಾ ಶಾಲೆಯ ಶಿಕ್ಷಕರು ಅಥವಾ ಮುಖ್ಯ ಶಿಕ್ಷಕರ ಮೊಬೈಲ್ ಸಂಖ್ಯೆ ಮೂಲಕ ನೋಂದಣಿ ಮಾಡಿಸಬೇಕು ಎಂದು ಇಲಾಖೆ ತಿಳಿಸಿದೆ.