ಸೋಂಕಿನಿಂದ ಗುಣಮುಖರಾಗಿ 3 ತಿಂಗಳ ನಂತರ ಲಸಿಕೆ, ಬೂಸ್ಟರ್ ಡೋಸ್: ಕೇಂದ್ರ

Public TV
1 Min Read
vaccine

ನವದೆಹಲಿ: ಕೋವಿಡ್ ಸೋಂಕಿತರು ಗುಣಮುಖರಾದ ಮೂರ ತಿಂಗಳ ನಂತರ ಲಸಿಕೆ ನೀಡಬೇಕು ಎಂಬ ನಿಯಮ ಬೂಸ್ಟರ್ ಡೋಸ್‍ಗೂ ಅನ್ವಯವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾದ 3 ತಿಂಗಳ ನಂತರ ಕೋವಿಡ್ ಲಸಿಕೆಗಳು ಸೇರಿದಂತೆ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಹೆಚ್ಚುವರಿ ಆರೋಗ್ಯ ಕಾರ್ಯದರ್ಶಿ ವಿಕಾಸ್ ಶೀಲ್ ಶುಕ್ರವಾರ ರಾಜ್ಯಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಕರೊನಾ ವೈರಸ್ ಸೋಂಕಿನಿಂದ ಬಳಲುತ್ತಿರುವ ಜನರಿಗೆ ಬೂಸ್ಟರ್ ಡೋಸ್‍ಗಳು ಸೇರಿದಂತೆ ಲಸಿಕೆ ಪ್ರಮಾಣವನ್ನು ಮೂರು ತಿಂಗಳವರೆಗೆ ವಿಳಂಬಗೊಳಿಸುವಂತೆ ಆರೋಗ್ಯ ಸಚಿವಾಲಯವು ರಾಜ್ಯಗಳನ್ನು ಕೇಳಿದೆ. ಇದನ್ನೂ ಓದಿ: UP Election: ಭಾರತದ ಅತಿ ಎತ್ತರದ ಮನುಷ್ಯ ಸಮಾಜವಾದಿ ಪಕ್ಷ ಸೇರ್ಪಡೆ

CORONA 10

15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನು ಜನವರಿ 3 ರಿಂದ ಪ್ರಾರಂಭಿಸಲಾಯಿತು. ಆರೋಗ್ಯ ಸಿಬ್ಬಂದಿ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್‍ನ್ನು ರಾಷ್ಟ್ರೀಯ ಕೋವಿಡ್ ಲಸಿಕೆ ಕಾರ್ಯಕ್ರಮದ ಅಡಿಯಲ್ಲಿ ಜನವರಿ 10 ರಿಂದ ಪ್ರಾರಂಭಿಸಲಾಯಿತು. ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಅನ್ನು ಮುನ್ನೆಚ್ಚರಿಕೆ ಡೋಸ್ ಆಗಿ ನೀಡಲಾಗುತ್ತಿದೆ. ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, ಲಸಿಕೆಯ ಎರಡನೇ ಡೋಸ್ ಪಡೆದ ನಂತರ 3 ತಿಂಗಳ ಅವಧಿಯಲ್ಲಿ ಬೂಸ್ಟರ್ ಡೋಸ್ ನೀಡಲಾಗುವುದು. ಇದನ್ನೂ ಓದಿ: UP Election – ಅಮಿತ್ ಶಾ ಮನೆ-ಮನೆ ಪ್ರಚಾರ

CHILDREN VACCINE

ಹಲವು ದೇಶಗಳಲ್ಲಿ ಕೋವಿಡ್ ಲಸಿಕೆ ಹಾಗೂ ಬೂಸ್ಟರ್ ಡೋಸ್ ನೀಡಿಕೆ ಅಂತರವು ಆರು ತಿಂಗಳುಗಳಾಗಿರುತ್ತದೆ. ಇದು ಲಸಿಕೆಯಿಂದ ಉತ್ಪತ್ತಿಯಾಗುವ ಪ್ರತಿಕಾಯಗಳು ಕಡಿಮೆಯಾಗಲು ಪ್ರಾರಂಭಿಸುವ ಸಮಯ ಎಂದು ವಿಜ್ಞಾನವು ನಿರೂಪಿಸಿದೆ. ಕೋವಿಡ್‍ನಿಂದ ಚೇತರಿಸಿಕೊಂಡ ನಂತರ ಜನರು ಶೀಘ್ರದಲ್ಲೇ ಲಸಿಕೆಯನ್ನು ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಆದರೂ ಅನೇಕ ದೇಶಗಳು ಲಸಿಕೆ ನೀಡುವ ವಿಚಾರದಲ್ಲಿ ಕೆಲವು ದಿನಗಳ ಅಂತರವನ್ನು ಕಾಯ್ದು ವ್ಯಾಕ್ಸಿನ್ ನೀಡುತ್ತಿವೆ. ಸೋಂಕಿನಿಂದ ಚೇತರಿಕೆಯ ನಂತರ ಮೂರು ತಿಂಗಳ ಅಂತರವನ್ನು ಕಾಯ್ದುಕೊಳ್ಳುವ ಆರೋಗ್ಯ ಸಚಿವಾಲಯದ ನಿರ್ದೇಶನವು ತಜ್ಞರ ಸಮಿತಿಯ ಶಿಫಾರಸುಗಳನ್ನು ಆಧರಿಸಿದೆ.

Share This Article
Leave a Comment

Leave a Reply

Your email address will not be published. Required fields are marked *