Connect with us

ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ: ಎಸ್.ಟಿ.ಸೋಮಶೇಖರ್

ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ: ಎಸ್.ಟಿ.ಸೋಮಶೇಖರ್

ಮೈಸೂರು: ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವೈದ್ಯರ ನಡಿಗೆ ಹಳ್ಳಿಯ ಕಡೆಗೆ ನಿಮ್ಮ ಆರೋಗ್ಯ ನಮ್ಮ ಭಾದ್ಯತೆ ಎಂಬ ಕಾರ್ಯಕ್ರಮಕ್ಕೆ ಹೂಟಗಳ್ಳಿಯ ಹೌಸಿಂಗ್ ಬೋರ್ಡ್ ಸರ್ಕಲ್‍ನಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಚಾಲನೆ ನೀಡಿದರು.

ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಇದು ರಾಜ್ಯ ಸರಕಾರ ರೂಪಿಸಿದ ಉತ್ತಮ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕಾಗಿ ಇಡೀ ಜಿಲ್ಲೆಗೆ 35 ವಾಹನಗಳು ದೊರಕಿವೆ ಎಂದರು. ಪ್ರತೀ ತಾಲೂಕಿಗೆ 5 ವಾಹನಗಳಲ್ಲಿ ತಂಡವನ್ನು ಕಳುಹಿಸಲಾಗುತ್ತದೆ. ಪ್ರತೀ ಹಳ್ಳಿಗೆ ತೆರಳಿ ಜನರ ಆರೋಗ್ಯವನ್ನು ಆಯಾ ಸ್ಥಳದಲ್ಲೇ ಪರೀಕ್ಷಿಸಿ, ಸ್ಥಳದಲ್ಲೇ ಚಿಕಿತ್ಸೆ ನೀಡುವುದು ಹಾಗೂ ಹೆಚ್ಚಿನ ಸಮಸ್ಯೆ ಇದ್ದರೆ ಕೋವಿಡ್ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು ಎಂದರು. ಇದನ್ನೂ ಓದಿ: ಪರಿಸ್ಥಿತಿ ಸುಧಾರಣೆಯಾದ್ರೆ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ – ಸಿಎಂ ಬಿಎಸ್‍ವೈ

ಜಿಲ್ಲೆಯಲ್ಲಿ ಶೇ 98 ರಷ್ಟು ಸಮೀಕ್ಷಾ ಕಾರ್ಯ ಪೂರ್ಣಗೊಂಡಿದೆ. ಜುಲೈ 1ರೊಳಗೆ ಎಲ್ಲಾ ಹಳ್ಳಿಗಳ ಸಂಪೂರ್ಣ ಸರ್ವೇ ಮುಗಿಸುತ್ತೇವೆ. ಜಿಲ್ಲೆಯಲ್ಲಿ ಏನೇ ಸಮಸ್ಯೆ ಇದ್ದರೂ ಅದನ್ನು ತಾಯಿ ಚಾಮುಂಡೇಶ್ವರಿ ಆದಷ್ಟು ಬೇಗ ಪರಿಹರಿಸುತ್ತಾಳೆ ಎಂಬ ಭರವಸೆ ನನಗಿದೆ. ಈ ಕಾರ್ಯಕ್ರಮದ ಅಂಬ್ಯುಲೆನ್ಸ್ ವಾಹನದಲ್ಲಿ ಇಬ್ಬರು ವೈದ್ಯರು, ಒಬ್ಬರು ಕಿರಿಯ ನರ್ಸ್ ಹಾಗೂ ಒಬ್ಬರು ಲ್ಯಾಬ್ ಟೆಕ್ನಿಷಿಯನ್ ಇರುತ್ತಾರೆ. ಈ ವಾಹನ ನಿತ್ಯ 20 ಹಳ್ಳಿಗಳನ್ನು ಸಂಚರಿಸುತ್ತದೆ. ಆಶಾ ಕಾರ್ಯಕರ್ತೆಯರ ಸಹಾಯದೊಂದಿಗೆ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಯಲಿದೆ ಎಂದರು. ಇದನ್ನೂ ಓದಿ: 12 ಕೋಟಿ ಸಿಎಸ್‍ಆರ್ ಫಂಡ್ ಖರ್ಚಿನ ಮಾಹಿತಿ ಕೇಳಿದ್ದೆ ಅಷ್ಟೇ – ರೋಹಿಣಿ ಸಿಂಧೂರಿ

7 ದಿನಗಳಲ್ಲಿ ಎಲ್ಲಾ ಹಳ್ಳಿಗಳಲ್ಲೂ ಅಂಬ್ಯುಲೆನ್ಸ್ ಸಂಚರಿಸಲಿವೆ. ಕೊರೊನಾ ಲಕ್ಷಣಗಳಿದ್ದರೆ ಅವರಿಗೆ ಹೋಮ್ ಐಸೋಲೇಷನ್‍ಗೆ ಚಿಕಿತ್ಸೆ ವ್ಯವಸ್ಥೆ ಮಾಡುತ್ತಾರೆ. ಎಲ್ಲರಿಗೂ ರ್ಯಾಪಿಡ್ ಟೆಸ್ಟ್ ಕಿಟ್‍ಗಳನ್ನು ಕೊಡಲಾಗಿದೆ. ಅವರು ಪರೀಕ್ಷಿಸಿ ಗಂಭೀರ ಸಮಸ್ಯೆ ಇದ್ದರೆ ಕೋವಿಡ್ ಅಸ್ಪತ್ರೆಗೆ ರವಾನಿಸುತ್ತಾರೆ. ಇಲ್ಲವಾದರೆ ಕೋವಿಡ್ ಸೆಂಟರ್ ಗೆ ಕಳುಹಿಸಿಕೊಡಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ದ್ವಿತೀಯ ಪಿಯುಸಿ ಮಕ್ಕಳು ಪರೀಕ್ಷೆ ಇಲ್ಲದೇ ಪಾಸ್: ಸುರೇಶ್ ಕುಮಾರ್

ಕಾರ್ಯಕ್ರದಲ್ಲಿ ಶಾಸಕರಾದ ಜಿ.ಟಿ. ದೇವೇಗೌಡ, ತನ್ವೀರ್ ಸೇಠ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾದಿಕಾರಿ ರೋಹಿಣಿ ಸಿಂಧೂರಿ, ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥಸ್ವಾಮಿ, ತಹಶೀಲ್ದಾರ್ ರಕ್ಷಿತ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಟಿ. ಅಮರನಾಥ್, ನೂಡಲ್ ಅಧಿಕಾರಿ ಡಾ. ಎಲ್.ರವಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Advertisement
Advertisement