Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ – ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ – ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ

Bengaluru City

ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ – ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ

Public TV
Last updated: December 27, 2025 1:55 pm
Public TV
Share
2 Min Read
TTD Bengaluru
SHARE

– ತಿರುಮಲದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಪವಿತ್ರ ವೈಕುಂಠ ಏಕಾದಶಿ (Vaikunta Ekadasi) ಪರ್ವದಿನದ ಪ್ರಯುಕ್ತ ಬೆಂಗಳೂರಿನ (Bengaluru) ವೈಯಾಲಿಕಾವಲ್‌ನ 16ನೇ ಕ್ರಾಸ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಟಿಟಿಡಿ (TTD Temple) ಮಾಹಿತಿ ಕೇಂದ್ರದಲ್ಲಿ ಡಿ.30 ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಸ್ಥಳೀಯ ದೇವಸ್ಥಾನದ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದ ಟಿಟಿಡಿ ಬೆಂಗಳೂರು ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಕೆ.ವೀರಾಂಜನೇಯಲು ಮಾತನಾಡಿ, ವೈಕುಂಠ ಏಕಾದಶಿಯಂದು ಭಕ್ತರಿಗೆ ಸುಗಮ ಮತ್ತು ಅನುಕೂಲಕರ ದರ್ಶನ ಕಲ್ಪಿಸುವ ನಿಟ್ಟಿನಲ್ಲಿ ಸಮಿತಿಯು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಂದು ಮಧ್ಯರಾತ್ರಿ 1:35 ರಿಂದ ರಾತ್ರಿ 11:45 ರ ವರೆಗೆ ನಿರಂತರ ದರ್ಶನಕ್ಕೆ ಅವಕಾಶವಿರುತ್ತದೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸರತಿ ಸಾಲಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಪವಿತ್ರ ದಿನದಂದು ಆಗಮಿಸುವ ಭಕ್ತಾದಿಗಳಿಗೆ ನಿರಂತರ ಅನ್ನಪ್ರಸಾದ ವಿನಿಯೋಗವಿರುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಚುನಾವಣೆ ವೇಳೆ ಪಿಣರಾಯಿ ರಾಜಕೀಯ ಗಿಮಿಕ್‌ ಮಾಡೋದು ಬೇಡ: ಡಿಕೆಶಿ ಕಿಡಿ

tirupati

ದೇವಸ್ಥಾನದ ಆವರಣದಲ್ಲಿ ಮುಂಜಾನೆ 2 ಗಂಟೆಯಿಂದ ಶ್ರೀವಾರಿ ಲಡ್ಡು ಪ್ರಸಾದ ಮಾರಾಟವನ್ನು (ಪ್ರತಿ ಲಡ್ಡುವಿಗೆ 50 ರೂ.) ಆಯೋಜಿಸಲಾಗಿದ್ದು, ದಾಸ್ತಾನು ಇರುವವರೆಗೂ ಇದು ಲಭ್ಯವಿರುತ್ತದೆ. ಭಕ್ತರ ಅನುಕೂಲಕ್ಕಾಗಿ 2026ರ ಟಿಟಿಡಿ ಡೈರಿಗಳು, ಕ್ಯಾಲೆಂಡರ್‌ಗಳು, ಅಗರಬತ್ತಿ ಮತ್ತು ಇತರೆ ಟಿಟಿಡಿ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಸಹ ತೆರೆಯಲಾಗುವುದು. ಈ ಬಾರಿ 70 ಸಾವಿರ ಭಕ್ತರು ಆಗಮಿಸುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು.

ತಿರುಮಲದ ಸಿದ್ಧತೆಗಳ ಕುರಿತು ಮಾತನಾಡಿದ ಟಿಟಿಡಿ ಮಂಡಳಿ ಸದಸ್ಯ ಎಸ್.ನರೇಶ್ ಕುಮಾರ್ ಮಾತನಾಡಿ, ತಿರುಮಲದಲ್ಲಿಯೂ ವೈಕುಂಠ ಏಕಾದಶಿಯ ಪ್ರಯುಕ್ತ ಬೃಹತ್ ಮಟ್ಟದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಬಾರಿ ವೈಕುಂಠ ದ್ವಾರದ ಮೂಲಕ ಪ್ರತಿದಿನ ಸುಮಾರು 80,000 ಕ್ಕೂ ಹೆಚ್ಚು ಭಕ್ತರಿಗೆ ದರ್ಶನ ಭಾಗ್ಯವನ್ನು ಕಲ್ಪಿಸಲು ಟಿಟಿಡಿ ಆಡಳಿತ ಮಂಡಳಿ ಯೋಜಿಸಿದೆ. ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಕಾಯುವ ಸಮಯದಲ್ಲಿ ಅನ್ನಪ್ರಸಾದ ಮತ್ತು ಪಾನೀಯಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ. ಭಕ್ತರ ಸುರಕ್ಷತೆ ಮತ್ತು ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಹಿರಿಯೂರು ಬಸ್ ದುರಂತ ಬೆನ್ನಲ್ಲೇ ಸರ್ಕಾರ ಅಲರ್ಟ್ – ಕೇಂದ್ರಕ್ಕೆ ಪತ್ರ ಬರೆಯಲು ರಾಮಲಿಂಗಾ ರೆಡ್ಡಿ ಚಿಂತನೆ

ಸಾಂಸ್ಕೃತಿಕ ಕಾರ್ಯಕ್ರಮಗಳು:
ಈ ಪವಿತ್ರ ಸಂದರ್ಭವನ್ನು ಗುರುತಿಸಲು ಬೆಂಗಳೂರಿನ ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್ (HDPP) ವತಿಯಿಂದ ದಿನವಿಡೀ ದೇವಸ್ಥಾನದ ಆವರಣದಲ್ಲಿ ಭಕ್ತಿ ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಸಮಸ್ತ ಭಕ್ತಾದಿಗಳು ಈ ವೈಕುಂಠ ಏಕಾದಶಿ ಆಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ವೆಂಕಟೇಶ್ವರ ಸ್ವಾಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಟಿಟಿಡಿ ಅಧಿಕಾರಿಗಳು ಕೋರಿದ್ದಾರೆ.

TAGGED:bengaluruTTD TempleVaikunta EkadasiVaikunta Ekadasi Celebrationsಟಿಟಿಡಿ ದೇವಸ್ಥಾನಬೆಂಗಳೂರುವೈಕುಂಠ ಏಕಾದಶಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Raichuru Crop Damage
Districts

ರಾಯಚೂರಿನಲ್ಲಿ ಅಕಾಲಿಕ ಮಳೆ – ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

Public TV
By Public TV
37 minutes ago
donald trump
Latest

ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Public TV
By Public TV
59 minutes ago
Air Ambulance Crash
Latest

ಜಾರ್ಖಂಡ್‌ನಲ್ಲಿ ಏರ್ ಅಂಬುಲೆನ್ಸ್ ಪತನ – ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ, ಹವಾಮಾನ ರೇಡಾರ್ ಪರಿಶೀಲನೆ

Public TV
By Public TV
2 hours ago
Turkish Air Force
Latest

Video Viral | ಅಮೆರಿಕ ನಿರ್ಮಿತ ಎಫ್‌-16 ಯುದ್ಧ ವಿಮಾನ ಪತನ – ಪೈಲಟ್‌ ಸಾವು

Public TV
By Public TV
2 hours ago
Vishwakarma Mahasamsthana Mutt 2
Bengaluru City

ವಿಶ್ವಕರ್ಮ ಮಹಾಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ, ಶಿಷ್ಯ ಸ್ವೀಕಾರ ಸಮಾರಂಭ

Public TV
By Public TV
3 hours ago
Ramanagar Robbery
Districts

ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ – ಖದೀಮರು ಎಸ್ಕೇಪ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?