ಬೆಂಗಳೂರು: ಶುಭ ಶುಕ್ರವಾರ ವೈಕುಂಠ ಏಕಾದಶಿ (Vaikuntha Ekadashi) ಪ್ರಯುಕ್ತ ಅಪಾರ ಸಂಖ್ಯೆಯಲ್ಲಿ ಬೆಂಗಳೂರು ನಗರದ ಹಲವು ದೇವಸ್ಥಾನಗಳಿಗೆ ಭಕ್ತರು ತೆರಳುತ್ತಿದ್ದಾರೆ. ಪ್ರಮುಖವಾಗಿ, ಬೆಂಗಳೂರಿನ (Bengaluru) ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಮತ್ತು ಇಸ್ಕಾನ್ ದೇವಸ್ಥಾನಕ್ಕೆ (ISKCON Temple) ಸಹಸ್ರಾರು ಭಕ್ತರು ಭೇಟಿ ನೀಡುತ್ತಿದ್ದಾರೆ.
ನಸುಕಿನ ಜಾವ 3:30 ರಿಂದಲೇ ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ದೇವರ ನಾಮಸ್ಮರಣೆ ಮಾಡುತ್ತಾ ಭಕ್ತರು ದರ್ಶನಕ್ಕೆ ಬರುತ್ತಿದ್ದಾರೆ. ಇದನ್ನೂ ಓದಿ: ಕಾಡಿನ ರಹಸ್ಯ ಸ್ಥಳದಲ್ಲಿ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿದ್ದಾರೆ ನಕ್ಸಲರು!
ವೈಕುಂಠ ಏಕಾದಶಿ ಹಿನ್ನೆಲೆ ಇಸ್ಕಾನ್ ದೇವಸ್ಥಾನದಲ್ಲಿ ನಸುಕಿನ ಜಾವ 3:45ರಿಂದಲೇ ವಿಶೇಷ ಪೂಜೆ, ಅಭಿಷೇಕ, ಲಕ್ಷ್ಮಿ ವೆಂಕಟೇಶ್ವರನಿಗೆ ವಿಶೇಷ ಮಂಗಳರಾತಿ ನೆರವೇರಿಸಲಾಗುತ್ತಿದೆ. ದರ್ಶನಕ್ಕೆ ಬರುವ ಜನರಿಗೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಪೂಜೆ ಬಳಿಕ ಭಕ್ತಾದಿಗಳಿಗೆ ಲಡ್ಡು, ಪೊಂಗಲ್ ವಿತರಣೆ ಮಾಡಲಾಗುತ್ತಿದೆ. ಅಲ್ಲದೇ ಶಾಸ್ತ್ರೀಯ ಸಂಗೀತ ಗಾಯಕಿ ವೇದಾ ವಿದ್ಯಾಭೂಷಣ್ ರಿಂದ ಸಂಗೀತ ಸೇವೆ ನೆರವೇರುತ್ತಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಇಸ್ಕಾನ್‌ನ ಸಂಪರ್ಕಾಧಿಕಾರಿ ಚೈತನ್ಯ ದಾಸ್ ಮಾತನಾಡಿದ್ದು, ಬೆಳಗ್ಗೆ 3 ಗಂಟೆಯಿಂದಲೇ ಸುಪ್ರಭಾತ ಸೇವೆ ಆರಂಭಗೊಂಡಿತ್ತು. 3:30ರ ವೇಳೆಗೆ ಮಹಾಭಿಷೇಕ ನೆರವೇರಿಸಲಾಯಿತು. ಮುಂದೆ ಶ್ರೀಕೃಷ್ಣನಿಗೆ ಲಕ್ಷ ಅರ್ಚನೆ ನಡೆಯಲಿದ್ದು, ಶ್ರೀನಿವಾಸ ಕಲ್ಯಾಣೋತ್ಸವ ನೆರವೇರಲಿದೆ. ರಾತ್ರಿ 11 ಗಂಟೆ ವರೆಗೂ ಇಸ್ಕಾನ್ ದೇವಸ್ಥಾನದಲ್ಲಿ ಭಕ್ತರಿಗೆ ಮುಕ್ತವಾಗಿ ದರ್ಶನ ಸಿಗಲಿದೆ ಎಂದು ತಿಳಿಸಿದ್ದಾರೆ.
ಇಂದು ಒಂದೂವರೆ ಲಕ್ಷ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೂ ಲಡ್ಡು ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಹಿರಿಯ ನಾಯರಿಕರಿಗೆ ದ್ವಾರದಿಂದ ದೇವಸ್ಥಾನದ ವರೆಗೂ ವಾಹನ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಮುಕ್ಕಾಲು ಕೆಜಿ ಚಿನ್ನ, 15 ಕೆಜಿ ಬೆಳ್ಳಿ, 5 ಲಕ್ಷ ಹಾರ್ಡ್ ಕ್ಯಾಶ್ ಕಳವು – ಕಳ್ಳರ ಕರಾಮತ್ತು ಕಂಡು ಥಂಡ ಹೊಡೆದ ಖಾಕಿ
ಇದರೊಂದಿಗೆ ಮಲ್ಲೇಶ್ವರದ ವೈಯಾಲಿಕಾವಲ್ ಟಿಟಿಡಿ ದೇವಾಲಯ, ನೆಲಮಂಗಲದಲ್ಲಿರುವ ಶ್ರೀ ವೆಂಕಟೇಶ್ವರನ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ ಹಾಗೂ ಮಹಾಮಂಗಳಾರತಿಗಳು ನಡೆಯುತ್ತಿವೆ. ದೇವರ ಸ್ಮರಣೆ ಮಾಡುತ್ತಲೇ ಸನ್ನಿಧಿಗೆ ಆಗಮಿಸುತ್ತಿರುವ ಭಕ್ತರು ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ.