ರಾಯಚೂರು: ವೈಕುಂಠ ಏಕಾದಶಿ ಹಿನ್ನೆಲೆ ಮಂತ್ರಾಲಯದ (Mantralaya) ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರು ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು.ಇದನ್ನೂ ಓದಿ: ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗಳಿಗೆ ಬಾಂಬ್ ಬೆದರಿಕೆ – ವಿದ್ಯಾರ್ಥಿ ಅರೆಸ್ಟ್
ರಾಘವೇಂದ್ರ ಸ್ವಾಮಿಗಳು ಸ್ಥಾಪಿಸಿರುವ ದೇಗುಲದಲ್ಲಿ ತುಳಸಿ ಅರ್ಚನೆ ಮತ್ತು ಪುಷ್ಪಾರ್ಚನೆ ನೆರವೇರಿಸಿ ವೆಂಕಟೇಶ್ವರ ಸ್ವಾಮಿಗೆ ಶ್ರೀಗಳು ಮಂಗಳಾರತಿ ಮಾಡಿದರು. ಬಳಿಕ ವೈಕುಂಠ ದ್ವಾರವನ್ನು ಉದ್ಘಾಟಿಸಿ, ಭಕ್ತರಿಗೆ ಅನುಗ್ರಹ ಸಂದೇಶ ನೀಡಿ ಆಶೀರ್ವದಿಸಿದರು. ಅಪಾರ ಸಂಖ್ಯೆಯ ಭಕ್ತರು ತಮ್ಮ ಪ್ರಾರ್ಥನೆ ಸಲ್ಲಿಸಿ ವೈಕುಂಠ ದ್ವಾರದ ಮೂಲಕ ಪ್ರವೇಶಿಸಿ ಆಶೀರ್ವಾದ ಪಡೆದರು.
ಇನ್ನೂ ವೈಕುಂಠ ಏಕಾದಶಿ ಹಿನ್ನೆಲೆ ರಾಯಚೂರಿನ (Raichuru) ವೆಂಕಟೇಶ್ವರ ದೇವಾಲಯಗಳಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತಿದೆ. ಮಂತ್ರಾಲಯ ರಸ್ತೆಯ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಅಲಂಕಾರಗಳಿಂದ ಇಡೀ ದೇವಾಲಯವನ್ನು ಸಿಂಗಾರ ಮಾಡಲಾಗಿದೆ. ಕಲ್ಯಾಣ ಶ್ರೀನಿವಾಸನಿಗೆ ವಿಶೇಷ ಪೂಜೆ ನೆರವೇರಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಲಾಗಿದೆ. ಬೆಳಿಗ್ಗೆ 5 ಗಂಟೆಯಿಂದ ಪೂಜೆ ಆರಂಭವಾಗಿದ್ದು, ರಾತ್ರಿ 11 ಗಂಟೆವರೆಗೂ ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಪಾರಾಯಣ ನಡೆಯಲಿದೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ.ಇದನ್ನೂ ಓದಿ: ಹೊರ ರಾಜ್ಯದ ದೇವಸ್ಥಾನಕ್ಕೆ ತೆರಳಲು ಅನುಮತಿ ನೀಡಿ – ಪವಿತ್ರಾ ಗೌಡ ಅರ್ಜಿ