ಮಂಡ್ಯ: ಇಂದು ಮಂಡ್ಯ (Mandya) ಜಿಲ್ಲೆಯ ಪಾಂಡವಪುರ (Pandavapura) ತಾಲೂಕಿನ ಮೇಲುಕೋಟೆಯಲ್ಲಿ (Melukote) ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ (Vairamudi Brahmotsava) ಜರುಗಲಿದೆ. ಈ ವೈರಮುಡಿ ಉತ್ಸವದಲ್ಲಿ ಶ್ರೀದೇವಿ, ಭೂದೇವಿಯರೊಂದಿಗೆ ಚೆಲುವನಾರಾಯಣಸ್ವಾಮಿ ಭಕ್ತರಿಗೆ ದರ್ಶನ ನೀಡಿಲಿದ್ದಾರೆ.
ಮಂಡ್ಯ ಜಿಲ್ಲಾಡಳಿತ ವತಿಯಿಂದ ನಡೆಯಲಿರುವ ವೈರಮುಡಿ ಉತ್ಸವಕ್ಕೆ ಬೆಳಗ್ಗೆ 8:30ಕ್ಕೆ ಚಾಲನೆ ಸಿಗಲಿದೆ. ಶ್ರೀದೇವಿ, ಭೂದೇವಿಯರ ಜೊತೆಗೆ ರತ್ನ ಖಚಿತ ವೈರಮುಡಿ ಕಿರೀಟ ಧರಿಸಿ ಭಕ್ತರಿಗೆ ದರ್ಶನ ನೀಡಲಿರುವ ಗರುಢಾರೂಢನಾದ ಚೆಲುವನಾರಾಯಣಸ್ವಾಮಿಯನ್ನು ನೋಡಿದರೆ ಸಾಕ್ಷಾತ್ ಭಗವಂತನೇ ಧರೆಗಿಳಿದು ವೈರಮುಡಿ ಕಿರೀಟ ಧರಿಸಿ ಭಕ್ತರಿಗೆ ದರ್ಶನ ನೀಡಿದಂತೆ ಭಾಸವಾಗುತ್ತದೆ. ಇದನ್ನೂ ಓದಿ: ಆಸ್ಪತ್ರೆಯಲ್ಲೇ ಹಿರಿಯ ವೈದ್ಯ ನೇಣಿಗೆ ಶರಣು
ಇಂದು ಚೆಲುವನಾರಾಯಣಸ್ವಾಮಿಯನ್ನು ಕಣ್ತುಂಬಿಕೊಳ್ಳಲು ಹೊರರಾಜ್ಯದಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಇಂದಿನ ವೈರಮುಡಿ ಉತ್ಸವಕ್ಕೆ ಲಕ್ಷಾಂತರ ಜನರು ಸಾಕ್ಷಿಯಾಗಲಿದ್ದಾರೆ. ಈಗಾಗಲೇ ಜಿಲ್ಲಾ ಖಜಾನೆಯಿಂದ ಆಭರಣಗಳು ದೇವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಗಿದೆ. ಇದನ್ನೂ ಓದಿ: ಇಂದಿನಿಂದ ಬಿಜೆಪಿ ‘ಜನಾಕ್ರೋಶ ಕಹಳೆ’ – ಹಳೇ ಮೈಸೂರು ಭಾಗದಿಂದಲೇ ಯಾತ್ರೆ
ಖಜಾನೆಯಿಂದ ಆಭರಣಗಳನ್ನು ಡಿಸಿ ಡಾ.ಕುಮಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ತಂದು ಹಸ್ತಾಂತರ ಮಾಡಿದ್ದಾರೆ. ಜಿಲ್ಲಾಡಳಿತದಿಂದ ಹಸ್ತಾಂತರವಾಗಿರುವ ವೈರಮುಡಿ ಆಭರಣಗಳನ್ನು ಬಿಗಿ ಭದ್ರತೆಯೊಂದಿಗೆ ತೆಗೆದುಕೊಂಡು ಹೋಗಲಾಗಿದೆ. ಇದನ್ನೂ ಓದಿ: ಯುವತಿಯೆಂದು ಯುವಕನಿಗೆ ಅಶ್ಲೀಲ ಮೆಸೇಜ್ – ಕಾಮುಕನಿಗೆ ಬಿತ್ತು ಧರ್ಮದೇಟು
ಮಂಡ್ಯ ನಗರದ ಪ್ರಮುಖ ಬೀದಿಯಲ್ಲಿ ಹಾದು ಹೋಗುವ ವೈರಮುಡಿ ಆಭರಣಗಳನ್ನು ಹೊತ್ತ ವಾಹನ ಬಳಿಕ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ತೆರಳಲಿದೆ. ನಂತರ ಬಾಬುರಾಯನಕೊಪ್ಪಲಿಗೆ ತೆರಳಿ ಅಲ್ಲಿಂದ ಪಾಂಡವಪುರಕ್ಕೆ ತೆರಳಿಲಿದೆ. ಬಳಿಕ ಜಕ್ಕನಹಳ್ಳಿಗೆ ತೆರಳಿ ಅಲ್ಲಿಂದ ಮೇಲುಕೋಟೆಗೆ ತೆರಳಲಿದೆ. ಈ ವೇಳೆ ದಾರಿ ಮಧ್ಯದಲ್ಲಿ ಸಿಗುವ ಗ್ರಾಮಗಳಲ್ಲಿ ವೈರಮುಡಿಗೆ ಪೂಜೆಸಲ್ಲಿಸಲಾಗುತ್ತದೆ. ಇದನ್ನೂ ಓದಿ: ಅಮೆರಿಕಕ್ಕೆ ಭಾರತದಿಂದ 5 ವಿಮಾನ ಭರ್ತಿ ಐಫೋನ್ ಕಳುಹಿಸಿದ ಆಪಲ್