‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ಯಾಗಿ ಅಗ್ನಿಸಾಕ್ಷಿ ವೈಷ್ಣವಿ ಮೋಡಿ

Public TV
1 Min Read
vaishnavi

ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಟೈಟಲ್ ಮೂಲಕ ಗಮನ ಸೆಳೆಯುತ್ತಿರೋ ಚಿತ್ರ `ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. `ಮಹಿರ’ ಚಿತ್ರ ಖ್ಯಾತಿಯ ಮಹೇಶ್ ಗೌಡ ಹೊಸ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ಸದ್ಯ ರಿವೀಲ್ ಮಾಡಿರೋ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಸಿನಿಪ್ರಿಯರನ್ನ ಅಟ್ರಾಕ್ಟ್ ಮಾಡ್ತಿದೆ.

vaishnavi filmಹೊನ್ನುಡಿ ಪ್ರೋಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರೋ, ಮಹೇಶ್ ಗೌಡ ನಿರ್ದೇಶನದ ಸಿನಿಮಾ `ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ದಿನೇಶ್ ಎಂಬ ಪಾತ್ರಕ್ಕೆ ನಿರ್ದೇಶಕ ಮಹೇಶ್ ಜೀವ ತುಂಬಿದ್ದಾರೆ. ಇನ್ನು ಮಹೇಶ್‌ಗೆ ಜೋಡಿಯಾಗಿ ಅಗ್ನಿಸಾಕ್ಷಿ ಖ್ಯಾತಿಯ ನಟಿ ವೈಷ್ಣವಿ ಹಳ್ಳಿ ಹುಡುಗಿಯಾಗಿ ಕವಿತಾ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನು ಓದಿ:ಜಾನ್ ಒಂದು ಹೇಳಿಕೆಯಿಂದ ಬಿತ್ತು ಭಾರೀ ಪೆಟ್ಟು – ಮಕಾಡೆ ಮಲಗಿದ `ಅಟ್ಯಾಕ್’

belli chukki halli hakki film`ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಚಿತ್ರ ರೊಮ್ಯಾಂಟಿಕ್ ಕಾಮಿಡಿ ಜಾನರ್ ಚಿತ್ರವಾಗಿದೆ. ನಾಯಕ ದಿನೇಶ್ ವಿಟಿಲಿಗೋ ಕಾಯಿಲೆಯಿಂದ ಬಳಲುತ್ತಿರುತ್ತಾನೆ. ದಿನೇಶ್‌ನ ಸಮಸ್ಯೆ ಗೊತ್ತಿದ್ರು ಬಾಳ ಸಂಗಾತಿಯಾಗಿ ಕವಿತಾ ಬರುತ್ತಾಳೆ. ಸಮಸ್ಯೆ ಗೊತ್ತಿದ್ರು ಕವಿತಾ ತನ್ನನ್ನ ಯಾಕೆ ಮದುವೆ ಆಗಿದ್ದಾಳೆ ಅನ್ನೋ ಗೊಂದಲದಲ್ಲಿರೋ ನಾಯಕನ ಕಥೆ. ಈ ಗೊಂದಲದ ಮಧ್ಯೆಯೇ ಸಾಗುವ ಒಂದು ಮುದ್ದಾದ ಲವ್ ಸ್ಟೋರಿ. ಫ್ರೆಶ್ ಲವ್‌ಸ್ಟೋರಿ ಫ್ರೆಶ್ ಫೇರ್ ಅದೆಷ್ಟರ ಮಟ್ಟಿಗೆ ಕಮಾಲ್ ಮಾಡಬಹುದು ಅಂತಾ ಕಾದು ನೋಡಬೇಕಿದೆ.

Share This Article
Leave a Comment

Leave a Reply

Your email address will not be published. Required fields are marked *