ಇಂದು ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವರ್ಣರಂಜಿತ ತೆರೆ

Public TV
1 Min Read
FotoJet 37

ಮಾರ್ಚ್ 3 ರಿಂದ ಏಳು ದಿನಗಳ ಕಾಲ ನಡೆದ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಇಂದು ತೆರೆ ಬೀಳಲಿದೆ. ಏಳು ದಿನಗಳ ಕಾಲ ಬೆಂಗಳೂರಿನ ಒರಾಯನ್ ಮಾಲ್, ಕನ್ನಡ ಚಲನಚಿತ್ರ ಕಲಾವಿದರ ಸಂಘ ಮತ್ತು ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ಚಿತ್ರ ಪ್ರದರ್ಶನಗಳು ನಡೆದವು. ಸಿನಿಮಾ ಸಂವಾದ, ಕಲಾವಿದರು ಮತ್ತು ತಂತ್ರಜ್ಞರ ಜತೆಗಿನ ಮಾತು, ಸಿನಿಮಾ ಸಂಬಂಧ ಮಾಸ್ಟರ್ ಕ್ಲಾಸ್ ಸೇರಿದಂತೆ ಹತ್ತು ಹಲವು ಚಟುವಟಿಕೆಗಳನ್ನು ಚಿತ್ರೋತ್ಸವದ ಅಡಿಯಲ್ಲಿ ಸಂಯೋಜಿಸಲಾಗಿತ್ತು. ಇದನ್ನೂ ಓದಿ : ಮಾ.13ಕ್ಕೆ ಅರಮನೆ ಮೈದಾನದಲ್ಲಿ ಜೇಮ್ಸ್ ಪ್ರೀ ಇವೆಂಟ್, ಹೊಸಪೇಟೆಯಲ್ಲಿ ಸಕ್ಸಸ್ ಸಂಭ್ರಮ

FotoJet 2 27

ಇಂದು ಸಂಜೆ 5.45ಕ್ಕೆ ಚಿತ್ರೋತ್ಸವಕ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸುವ ಮೂಲಕ ಅಂತಿಮ ತೆರೆ ಬೀಳಲಿದೆ. ಈ ಕಾರ್ಯಕ್ರಮವು ಬೆಂಗಳೂರಿನ ಜೆ.ಎನ್.ಟಾಟಾ ಆಡಿಟೋರಿಯಂನಲ್ಲಿ ನಡೆಯಲಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡುವರು. ಮುಖ್ಯ ಅಥಿಗಳಾ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ್, ಲೋಕಸಭಾ ಸದಸ್ಯರಾದ ಡಿ.ವಿ.ಸದಾನಂದ ಗೌಡ, ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಕರ್ನಾಟಕ ಚಲನಚಿತ್ರ ಅಕಾಡಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್. ಜೈರಾಜ್ ಭಾಗಿಯಾಗಲಿದ್ದಾರೆ. ಇದನ್ನೂ ಓದಿ : ಬೆಂಗಳೂರಿನಿಂದ ಗಡಿಭಾಗಕ್ಕೆ ಆರ್.ಆರ್.ಆರ್ ಅದ್ಧೂರಿ ಕಾರ್ಯಕ್ರಮ ಶಿಫ್ಟ್

FotoJet 1 28

ಈ ಸಂದರ್ಭದಲ್ಲಿ ಚಿತ್ರೋತ್ಸವದಲ್ಲಿ ಭಾಗಿಯಾಗಿ, ನಾನಾ ವಿಭಾಗಗಳಲ್ಲಿ ಪ್ರಶಸ್ತಿ ಪಡೆದ ಚಿತ್ರಗಳಿಗೆ ಪ್ರಶಸ್ತಿ, ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ಸಮಾರಂಭಕ್ಕೂ ಮುನ್ನ ಸುಮ ಸುಧೀಂದ್ರ ಮತ್ತು ತಂಡದವರಿಂದ ವೀಣಾ ಫ್ಯೂಜನ್ ಸಂಗೀತ ಕಾರ್ಯಕ್ರಮ ಆಯೋಜನೆ ಮಾಡಿದೆ ಕರ್ನಾಟಕ ಚಲನಚಿತ್ರ ಅಕಾಡಮಿ.

Share This Article
Leave a Comment

Leave a Reply

Your email address will not be published. Required fields are marked *