ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ನಡೆದಿದೆ ಎನ್ನಲಾದ 187 ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಜಾರಿ ನಿರ್ದೇಶನಾಲಯದ (ED) ಇಬ್ಬರು ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್ ದಾಖಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಹಣಕಾಸು ಇಲಾಖೆಯನ್ನು ಸಿಲುಕಿಸುವಂತೆ ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರಿಗೆ ಒತ್ತಡ ಹೇರಿದ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರನ್ನು 5 ವಲಯಗಳನ್ನಾಗಿ ವಿಭಜಿಸುವ ಮಸೂದೆಗೆ ಕ್ಯಾಬಿನೆಟ್ ಒಪ್ಪಿಗೆ
Advertisement
Advertisement
ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಬಿ (Kallesh B) ದೂರು ಆಧರಿಸಿ ಮುರಳಿ ಕಣ್ಣನ್ ಮತ್ತು ಮಿತ್ತಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Advertisement
ಜುಲೈ 16 ರಂದು ನಡೆದ ವಿಚಾರಣೆ ವೇಳೆ ಕಣ್ಣನ್ 17 ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ಪ್ರಕರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ, ಸಿಎಂ ಸಿದ್ದರಾಮಯ್ಯ ಹಣಕಾಸು ಇಲಾಖೆಯನ್ನು ಹೆಸರು ಹೇಳುವಂತೆ ಕಣ್ಣನ್ ಕೇಳಿಕೊಂಡರು ಎಂದು ಅವರು ಆರೋಪಿಸಿದ್ದಾರೆ.
Advertisement
ವಾಲ್ಮೀಕಿ ನಿಗಮದ ತನಿಖೆಯನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ (SIT) ವಹಿಸಿದ್ದರೆ ಯೂನಿಯನ್ ಬ್ಯಾಂಕ್ ನೀಡಿದ ದೂರು ಆಧಾರಿಸಿ ಸಿಬಿಐ (CBI) ತನಿಖೆಗೆ ಇಳಿದಿದೆ. ಈ ವೇಳೆ ಅಕ್ರಮ ಹಣ ವರ್ಗಾವಣೆ ನಡೆದಿರುವ ಹಿನ್ನೆಲೆಯಲ್ಲಿ ಇಡಿ ಸಹ ತನಿಖೆ ನಡೆಸುತ್ತಿದೆ.