ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Corporation Scam) ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಅವರನ್ನ ಮತ್ತೆ 5 ದಿನ ಇಡಿ ಕಸ್ಟಡಿಗೆ (ED Custody) ನೀಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ (Representative Court) ಆದೇಶಿಸಿದೆ.
Advertisement
6 ದಿನಗಳ ಇ.ಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಗುರುವಾರ (ಜು.18) ವೈದ್ಯಕೀಯ ಪರೀಕ್ಷೆ (Medical Test) ಬಳಿಕ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಇಡಿ ಪರ ವಕೀಲ ಪ್ರಸನ್ನಕುಮಾರ್, ಇನ್ನೂ ವಿಚಾರಣೆ ಬಾಕಿ ಇರುವುದರಿಂದ 8 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದ್ರೆ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ 5 ದಿನಗಳ ಕಾಲ ಇ.ಡಿ ಕಸ್ಟಡಿಗೆ ಕೋರ್ಟ್ ಆದೇಶಿಸಿತು. 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್ ಇ.ಡಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ `ಸುಪಾರಿ’ ಗಲಾಟೆ: ಬಿಜೆಪಿ ಶಾಸಕರ ಮಾತಿಗೆ ಕಾಂಗ್ರೆಸ್ ಕೆಂಡಾಮಂಡಲ!
Advertisement
Advertisement
ಕೋರ್ಟ್‌ನಲ್ಲಿ ವಾದ-ಪ್ರತಿವಾದ ಹೇಗಿತ್ತು?
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಇದೇ ಜುಲೈ 12ರಂದು ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಲಾಗಿತ್ತು. 6 ದಿನಗಳ ಕಸ್ಟಡಿ ಅಂತ್ಯಗೊಂಡ ಬೆನ್ನಲ್ಲೇ ನಾಗೇಂದ್ರ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಬಳಿಕ ಇ.ಡಿ ಅಧಿಕಾರಿಗಳು ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ವೇಳೆ ಇಡಿ ಪರ ವಕೀಲ ಪ್ರಸನ್ನಕುಮಾರ್ ವಾದಿಸಿ, 8 ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ಇದಕ್ಕೆ ಆಕ್ಷೇಪಣೆ ಎತ್ತಿದ ಆರೋಪಿ ಪರ ವಕೀಲ ಶ್ಯಾಂ ಸುಂದರ್, ಈಗಾಗಲೇ ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ. ಇದೂವರೆಗೂ ಸಂಪೂರ್ಣ ರಿಮ್ಯಾಂಡ್ ಕಾಪಿ ಸಿಕ್ಕಿಲ್ಲ. ಈಗ ಹಾಜರುಪಡಿಸುತ್ತಿದ್ದಾರೆ. ಇಡಿ ಅಧಿಕಾರಿಗಳು ಪೊಲೀಸರ ಅಲ್ಲ. ಅವರು ದಾಖಲು ಮಾಡೋದು ಇಸಿಐಆರ್, ಎಫ್‌ಐಆರ್ ಅಲ್ಲ. ಅವರಿಗೆ ಬಂಧನ ಮಾಡುವ ಅಧಿಕಾರವೇ ಇಲ್ಲ. ಯಾವ ಅಧಿಕಾರದಲ್ಲಿ ಕಸ್ಟಡಿಗೆ ಕೇಳುತ್ತಾ ಇದ್ದಾರೆ? ಯಾವ ವಿಚಾರ ಇಟ್ಟುಕೊಂಡು ಕೇಳಲಾಗ್ತಿದೆ? ಎಂದು ವಾದಿಸಿದರು. ಇದನ್ನೂ ಓದಿ: NEET: ಪರೀಕ್ಷೆ ಸರಿಯಾಗಿ ನಡೆಯದಿದ್ದರೆ ಮಾತ್ರ ಮರುಪರೀಕ್ಷೆ ಮಾಡಬಹುದು: ಸುಪ್ರೀಂ ಕೋರ್ಟ್
Advertisement
ಇದಕ್ಕೆ ಪ್ರತಿವಾದ ಮಂಡಿಸಿದ ಪ್ರಸನ್ನಕುಮಾರ್, ಮತ್ತೆ ರಿಮ್ಯಾಂಡ್ ಕೇಳುತ್ತಾ ಇದ್ದಾರೆ. ನನಗೆ ಕಾಪಿ ಈಗ ಕೊಡ್ತಾ ಇದ್ದಾರೆ ಸರಿ ಅಲ್ಲ. ನೀವು ಹೊಸ ಅಡ್ವಕೇಟ್ ಅಲ್ಲ. ಕಾನೂನಿನ ಪ್ರಕಾರ ಮೊದಲೇ ರಿಮ್ಯಾಂಡ್ ಕಾಪಿ ಕೊಡಬೇಕು ಅಂತ ಇಲ್ಲ. ನಾವು ನ್ಯಾಯಾಲಯಕ್ಕೆ ಕೊಡಬೇಕು. ನ್ಯಾಯಾಲಯದ ಗಮನಕ್ಕೆ ತಂದ ಮೇಲೆಯೇ ಕಸ್ಟಡಿಗೆ ಪಡೆಯೋದು. ಡಿಫೆನ್ಸ್ ಅಡ್ವೊಕೇಟ್‌ಗೆ ಮಾಹಿತಿ ನೀಡಲು ಸಾಧ್ಯವಿಲ್ಲ. ಇದೆಲ್ಲ ಅವರಿಗೆ ಗೊತ್ತಿದೆ ಎಂದು ಕುಟುಕಿದರು. ಇದನ್ನೂ ಓದಿ: ನಟ ದರ್ಶನ್ & ಗ್ಯಾಂಗ್‌ಗೆ ಆ.1ರ ವರೆಗೆ ಜೈಲೇ ಗತಿ – ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ
ಅಲ್ಲದೇ ತನಿಖೆಗೆ ನಾಗೇಂದ್ರ ಸಹಕರಿಸುತ್ತಿಲ್ಲ. ಹೆಚ್ಚಿನ ವಿಚಾರಣೆ ಮುಂದುವರಿಸುವ ಅಗತ್ಯ ಇದೆ. ಪಿಎಂಎಲ್‌ಎ ಸೆಕ್ಷನ್ 65 ಅಡಿ ಆರೋಪಿ ಹೇಳಿಕೆ ದಾಖಲಿಸಲು ಅಧಿಕಾರ ಇದೆ ಎಂದರು. ಈ ವೇಳೆ ಶ್ಯಾಂ ಸುಂದರ್ ಅವರು, ನಾಗೇಂದ್ರ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿ, ಇಡಿ ಅಧಿಕಾರಿಗಳು ಅಲ್ಲಿಯೇ ವಿಚಾರಣೆ ಮಾಡಬಹುದು. ಇಲ್ಲಿದ್ದರೇ ಅವರ ಮೇಲೆ ಒತ್ತಡ ಹೇರಲಾಗುತ್ತೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿ, ಈಗಾಗಲೇ ಹೇಳಿಕೆ ದಾಖಲು ಮಾಡಿ ಆಗಿದೆ ಎಂದು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ಬಳಿಕ ಕೋರ್ಟ್ ಮತ್ತೆ 5 ದಿನಗಳ ಕಾಲ ಇ.ಡಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿತು. ಇದನ್ನೂ ಓದಿ: ಮುಡಾ, ವಾಲ್ಮೀಕಿ ಹಗರಣ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – ಕಟ್ಟೆಯೊಡೆದ ಆಕ್ರೋಶ!