ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಪೊಲೀಸರು 12 ಮಂದಿ ಆರೋಪಿಗಳ ವಿರುದ್ಧ 3ನೇ ಎಸಿಎಂಎಂ ಕೋರ್ಟ್‌ನಲ್ಲಿ ಚಾರ್ಜ್ ಶೀಟ್ (Charge Sheet) ಸಲ್ಲಿಕೆ ಮಾಡಿದ್ದಾರೆ.
ಈ ಹಿಂದೆ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಅಧಿಕಾರಿಗಳು ಪ್ರಥಮ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ದೋಷಾರೋಪಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ (Nagendra), ಬಸನಗೌಡ ದದ್ದಲ್ (Basanagouda Daddal) ಅವರ ಹೆಸರಿಲ್ಲ. ಇದನ್ನೂ ಓದಿ: ಜನರನ್ನ ಕಾಪಾಡಬೇಕಾದ ಶಾಸಕರೇ ನರಭಕ್ಷಕರಾದ್ರೆ ನಮ್ಮ ಗತಿಯೇನು?: ಮೃತ ಪಿಎಸ್‌ಐ ಪರಶುರಾಮ್ ಮಾವ ಕಿಡಿ
Advertisement
ಸುಮಾರು 3,072 ಪುಟಗಳ ಚಾರ್ಜ್ ಶೀಟ್ ಇದಾಗಿದ್ದು ಸತ್ಯಾರಾಯಣ ವರ್ಮಾ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಇದನ್ನೂ ಓದಿ: ಅಮೆರಿಕದಲ್ಲಿ ನಿರುದ್ಯೋಗ ದರ ಏರಿಕೆ, ಆರ್ಥಿಕ ಹಿಂಜರಿತ ಭೀತಿ – ಕರಗಿತು ಹೂಡಿಕೆದಾರರ 17 ಲಕ್ಷ ಕೋಟಿ ರೂ. ಸಂಪತ್ತು
Advertisement
ತನಿಖೆಯ ವೇಳೆ ಸುಮಾರು 45 ಕೋಟಿ ರೂ. ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ ಎಂದು ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.