ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Development Corporation) ಕೋಟ್ಯಂತರ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ ಮೂಲದ ಚಂದ್ರಮೋಹನ್ ಎಂಬಾತನನ್ನು ಬಂಧಿಸಲಾಗಿದೆ. ಹೈದರಾಬಾದ್‌ನ ಹಳ್ಳಿಯೊಂದರಲ್ಲಿ ಆರೋಪಿ ಎಸ್‌ಐಟಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿದ್ದರಾಮಯ್ಯನವರೇ ಎ1 ಆರೋಪಿ: ಅಶೋಕ್ ಗಂಭೀರ ಆರೋಪ
ಪ್ರಕರಣದಲ್ಲಿ ಸತ್ಯನಾರಾಯಣ ವರ್ಮ ಎಂಬಾತ ಬಂಧನವಾಗಿತ್ತು. ವರ್ಮ ಬಳಿ 10 ಕೋಟಿ ನಗದು, 16 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿತ್ತು. ವರ್ಮ ಜೊತೆ ಕೈಜೋಡಿಸಿದ್ದ ಆರೋಪದ ಮೇಲೆ ಈಗ ಚಂದ್ರಮೋಹನ್‌ನನ್ನು ಬಂಧಿಸಲಾಗಿದೆ.
ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬಂಧಿತ ಆರೋಪಿಗಳಾದ ಸತ್ಯನಾರಾಯಣ ವರ್ಮ ಹಾಗೂ ಚಂದ್ರಮೋಹನ್ ಇಬ್ಬರನ್ನೂ 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ – ಮೂವರು ಬ್ಯಾಂಕ್ ಸಿಬ್ಬಂದಿಗೆ ಎಸ್‌ಐಟಿ ನೋಟಿಸ್
18 ನಕಲಿ ಅಕೌಂಟ್‌ಗಳ ರೂವಾರಿ ಚಂದ್ರಮೋಹನ್. ಈಗಾಗಲೇ ಎಸ್‌ಐಟಿ ಅಧಿಕಾರಿಗಳು 8.60 ಕೋಟಿ ಹಣ ವಶಪಡಿಸಿಕೊಂಡಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ಹಣ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಈಗಾಗಲೇ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.