– ಉಡುಪಿ ಮೂಲದ ಮತ್ತೋರ್ವ ಆರೋಪಿ ಬಂಧನ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Valmiki Development Corporation) 187 ಕೋಟಿ ರೂ. ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಎಸ್‌ಐಟಿ ದಾಳಿ ವೇಳೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ.
ವಿಶೇಷ ತನಿಖಾ ತಂಡವು (SIT) ಪದ್ಮನಾಭ್ ಅವರಿಗೆ ಸೇರಿದ್ದ ಕೊಡಿಗೇನಹಳ್ಳಿ ಮನೆಯಲ್ಲಿ ದಾಳಿ ನಡೆಸಿದ ವೇಳೆ ಸುಮಾರು 3.60 ಕೋಟಿ ರೂ.ಗಳಷ್ಟು ಹಣ ಪತ್ತೆಯಾಗಿದೆ. ಸ್ಥಳದಲ್ಲಿ ಪತ್ತೆಯಾದ ಹಣವನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದೇ ವೇಳೆ ಪ್ರಕರಣದ ಮತ್ತೋರ್ವ ಆರೋಪಿ ಆಗಿರುವ ಉಡುಪಿ (Udupi) ಮೂಲದ ಜಗದೀಶ್ ಎಂಬಾತನನ್ನ ಬಂಧಿಸಲಾಗಿದೆ ಎಂದು ಎಸ್‌ಐಟಿ ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ – ಮೂವರು ಬ್ಯಾಂಕ್ ಸಿಬ್ಬಂದಿಗೆ ಎಸ್‌ಐಟಿ ನೋಟಿಸ್
Advertisement
Advertisement
ಇತ್ತೀಚೆಗಷ್ಟೇ ಹೈದರಾಬಾದ್ ಮೂಲದ ಚಂದ್ರಮೋಹನ್ ಎಂಬಾತನನ್ನು ಎಸ್‌ಐಟಿ ಬಂಧಿಸಿತ್ತು. ಪ್ರಕರಣದಲ್ಲಿ ಸತ್ಯನಾರಾಯಣ ವರ್ಮ ಎಂಬಾತ ಬಂಧನವಾಗಿತ್ತು. ವರ್ಮ ಬಳಿ 10 ಕೋಟಿ ನಗದು, 16 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಈತನೊಂದಿಗೆ ಕೈಜೋಡಿಸಿದ್ದ ಆರೋಪದ ಮೇಲೆ ಚಂದ್ರಮೋಹನ್ ಎಂಬಾತನನ್ನೂ ಬಂಧಿಸಲಾಗಿತ್ತು. 18 ನಕಲಿ ಅಕೌಂಟ್‌ಗಳ ರೂವಾರಿ ಚಂದ್ರಮೋಹನ್‌ನಿಂದ ಎಸ್‌ಐಟಿ ಅಧಿಕಾರಿಗಳು 8.60 ಕೋಟಿ ಹಣವನ್ನೂ ವಶಪಡಿಸಿಕೊಂಡಿದ್ದರು. ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿ ಅಂದಿದ್ದಾರೆ, ನನ್ನ ಹೆಸರು ಹೇಳಿಲ್ಲ- ಶರಣ ಪ್ರಕಾಶ್ ಪಾಟೀಲ್ ಫಸ್ಟ್ ರಿಯಾಕ್ಷನ್
Advertisement
Advertisement
ಇದಕ್ಕೂ ಮುನ್ನವೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (Karnataka Maharshi Valmiki Scheduled Tribe Development Corporation Ltd) ನಡೆದಿರುವ ಹಗರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಖಾತೆಗಳಲ್ಲಿನ ವಂಚನೆಯ ವಹಿವಾಟಿನ ಬಗ್ಗೆ ಬ್ಯಾಂಕ್ ಅರಿವು ಹೊಂದಿದೆ. ಅಕ್ರಮಗಳು ಬೆಳಕಿಗೆ ಬಂದಾಗ ಬ್ಯಾಂಕ್ ತಕ್ಷಣವೇ ಪ್ರಶ್ನಾರ್ಹ ವಹಿವಾಟುಗಳನ್ನು ವಂಚನೆ ಎಂದು ಘೋಷಿಸಿದೆ. ಸಂಪೂರ್ಣ ತನಿಖೆ ಮತ್ತು ಅಪರಾಧಿಗಳ ಪತ್ತೆಗಾಗಿ ಮೇ 30 ರಂದು ಕೇಂದ್ರೀಯ ತನಿಖಾ ದಳಕ್ಕೆ (CBI) ದೂರು ನೀಡಿದ್ದೇವೆ. ಮುಂದಿನ ವಿಚಾರಣೆಗಾಗಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ಸಮಸ್ಯೆಯನ್ನು ನ್ಯಾಯಯುತವಾಗಿ ಮತ್ತು ತ್ವರಿತವಾಗಿ ಪರಿಹರಿಸಲು ನಾವು ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಮತ್ತು ಅಂತಹ ಘಟನೆಗಳನ್ನು ತಡೆಯಲು ನಾವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದೆ.
ಏನಿದು ಪ್ರಕರಣ?
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ (Chandrashekaran) ಇತ್ತೀಚೆಗೆ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದನ್ನೂ ಓದಿ: ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ, ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು: ಎಂ.ಲಕ್ಷ್ಮಣ್