ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ಹಣ ದುರುಪಯೋಗ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ್ ಮತ್ತು ಲೆಕ್ಕಾಧಿಕಾರಿ ಪರಶುರಾಮ್ ಜಿ.ದುರ್ಗಣ್ಣ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿಗಮದ ಮುಖ್ಯ ಖಾತೆಯಲ್ಲಿ ಮೀಸಲಿಟ್ಟಿದ್ದ 187 ಕೋಟಿ ರೂ. ಮೊತ್ತದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೇ 88 ಕೋಟಿ ರೂ. ಹಣವನ್ನು ಅನ್ಯ ಖಾತೆಗೆ ವರ್ಗಾಯಿಸಿ ದುರುಪಯೋಗ ಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ – ಅಧಿಕಾರಿಗಳು, ಬ್ಯಾಂಕ್ ಉದ್ಯೋಗಿ ವಿರುದ್ಧ ಎಫ್‌ಐಆರ್
ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್‌ನೋಟ್ ಬರೆದಿಟ್ಟು ನಿಗಮದ ಅಧೀಕ್ಷಕ ಚಂದ್ರಶೇಖರ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್‌ನೋಟ್‌ನಲ್ಲಿ ಇಬ್ಬರು ಅಧಿಕಾರಿಗಳು ಮತ್ತು ಬ್ಯಾಂಕ್ ಉದ್ಯೋಗಿಯೊಬ್ಬರ ಹೆಸರನ್ನು ಉಲ್ಲೇಖಿಸಿದ್ದರು. ಅಕ್ರಮ ಹಣ ವರ್ಗಾವಣೆಗೆ ಇವರೇ ಕಾರಣ ಎಂದು ಆರೋಪಿಸಿದ್ದರು.
ಇದೀಗ 88 ಕೋಟಿ ರೂ. ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಈಬ್ಬರು ಅಧಿಕಾರಗಳ ಅಮಾನತು ಮಾಡಲಾಗಿದೆ. ಇಲಾಖಾ ಸಚಿವರು, ನಿಗಮದ ಅಧ್ಯಕ್ಷರು, ಹಿರಿಯ ಅಧಿಕಾರಿಗಳ ಗಮನಕ್ಕೆ ತರದೇ ಯೂನಿಯನ್ ಆಫ್ ಇಂಡಿಯಾದ ಅಧಿಕೃತ ಖಾತೆಗೆ ವರ್ಗಾಯಿಸಲಾದ ಹಣವನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ನಿಗಮ ಆರಂಭಿಸಿದೆ. ಇದನ್ನೂ ಓದಿ: ಅಧಿಕಾರಿಗಳ ಹೆಸರು ಉಲ್ಲೇಖಿಸಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ!