– ಹಗರಣದ ಮತ್ತೋರ್ವ ಆರೋಪಿ ಬಂಧನ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Development Corporation) ಹಗರಣದಲ್ಲಿ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.
Advertisement
ಶ್ರೀನಿವಾಸ್ ಬಂಧಿತ ಆರೋಪಿ. ನಕಲಿ ಅಕೌಂಟ್‌ಗಳನ್ನು ಸೃಷ್ಟಿಸಿ ವಹಿವಾಟುಗಳನ್ನು ಮಾಡಿದ ಆರೋಪದ ಮೇಲೆ ಈತನನ್ನು ಬಂಧಿಸಲಾಗಿದೆ. ಕೋಟಿ ಕೋಟಿ ಹಣ ವಹಿವಾಟು ಮಾಡಲು ಆರೋಪಿ ಸಹಾಯ ಮಾಡಿದ್ದ ಎನ್ನಲಾಗಿದೆ.
Advertisement
Advertisement
ಹಗರಣ ಪ್ರಕರಣದ ಆರೋಪಿಗಳು ಒಂದೊಂದೇ ಸತ್ಯ ಬಾಯಿಬಿಡುತ್ತಿದ್ದಾರೆ. ವಾಲ್ಮೀಕಿ ನಿಗಮದ ಕೋಟ್ಯಂತರ ಹಣವನ್ನು ವಹಿವಾಟಿಗೆ 193 ಅಕೌಂಟ್‌ಗಳನ್ನು ಬಳಸಿಕೊಂಡಿದ್ದರು ಎನ್ನುವುದು ಬಯಲಾಗಿದೆ. ಹೈದರಾಬಾದ್ ಮೂಲದ ಸತ್ಯನಾರಾಯಣ ವರ್ಮ ಈ ಎಲ್ಲಾ ಯೋಜನೆಗೆ ಮಾಸ್ಟರ್ ಮೈಂಡ್ ಆಗಿದ್ದ.
Advertisement
ಖಾತೆಯಿಂದ ಹೊರಗೆ ಬಂದಿದ್ದ ಹಣವನ್ನು 193 ನಕಲಿ ಖಾತೆಗಳಿಗೆ ವಹಿವಾಟು ಮಾಡಿದ್ದಾರೆ. ಬಾರ್‌ನ ಮಾಲೀಕರ ಅಕೌಂಟ್‌ಗಳಿಗೆ ಹಣ ಕಳುಹಿಸಿ ಪರ್ಸಂಟೇಜ್ ಲೆಕ್ಕದಲ್ಲಿ ಕೋಟಿ ಕೋಟಿ ಹಣವನ್ನು ಡ್ರಾ ಮಾಡಿ ಕೊಟ್ಟಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ.
ಹಗರಣದ ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲಾಗಿದೆ. ಯಾರದ್ದೋ ಕಂಪನಿ ಹೆಸರಿನಲ್ಲಿ ಇನ್ಯಾರೋ ಖಾತೆ ತೆರೆದು ಕೋಟಿ ಕೋಟಿ ಹಣ ವರ್ಗಾವಣೆ ಮಾಡಿರುವುದು ಗೊತ್ತಾಗಿದೆ. ಅಸಲಿ ಕಂಪನಿಗಳ ಮಾಲೀಕರ ಗಮನಕ್ಕೆ ಬಾರದ ರೀತಿಯಲ್ಲಿ ವಂಚನೆ ಮಾಡಲಾಗಿದೆ. ಅದೇ ಕಂಪನಿ ಹೆಸರಿನಲ್ಲಿ ನಕಲಿ ಖಾತೆ ತೆರೆದು ಕೋಟಿ ಕೋಟಿ ಹಣ ವಹಿವಾಟು ಮಾಡಲಾಗಿದೆ. ನಕಲಿ ಅಕೌಂಟ್‌ನ ಅಸಲಿ ಮಾಲೀಕರನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಅಸಲಿ ಮಾಲೀಕರನ್ನ ಕರೆಸಿ ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಬಯಲಾಗಿದೆ. ಅಸಲಿ ಮಾಲೀಕರಿಗೆ ತಮ್ಮ ಕಂಪನಿ ಹೆಸರಿನಲ್ಲಿ ನಕಲಿ ಖಾತೆ ತೆರೆದಿರುವುದು ಗೊತ್ತಿಲ್ಲ. ಅದರಲ್ಲೂ ಆ ಖಾತೆಯಲ್ಲಿ ಕೋಟಿ ಕೋಟಿ ಹಣ ಇತ್ತೆ ಎಂದು ಅವರೇ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅಸಲಿ ಕಂಪನಿ ಮಾಲೀಕರಿಂದ ನಾಲ್ಕು ಎಫ್‌ಐಆರ್ ದಾಖಲಾಗಿದೆ.
ವಿಜಯ್ ಕೃಷ್ಣ ಹಾಗೂ ನವೀನ್‌ರಿಂದ ಕೆಪಿ ಅಗ್ರಹಾರದಲ್ಲಿ ಎಫ್‌ಐಆರ್ ದಾಖಲಾಗಿದೆ. ಇದರ ಜೊತೆಗೆ ವಿಜಯನಗರ ಠಾಣೆಯಲ್ಲಿ ರಾಘವೆಂದ್ರ ಹಾಗೂ ರೇಖಾ ಎಂಬವರು ದೂರು ದಾಖಲಿಸಿದ್ದಾರೆ. ಒಂದೊಂದು ಅಕೌಂಟ್‌ನಲ್ಲಿ ಸುಮಾರು 5 ಕೋಟಿಯಂತೆ 20 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಹಣ ವರ್ಗಾವಣೆ ಮತ್ತೆ ಆ ಖಾತೆಗಳಿಂದ ಹಣ ಡ್ರಾ ಮಾಡಿಕೊಳ್ಳಲಾಗಿದೆ. ಈ ಖಾತೆಗಳಿಗೆ ವಾಲ್ಮೀಕಿ ನಿಗಮದ ಅಧಿಕೃತ ಖಾತೆಯಿಂದ ಹಣ ವರ್ಗಾವಣೆಯಾಗಿದೆ. ಸದ್ಯ ಈ ನಾಲ್ಕು ಎಫ್‌ಐಆರ್‌ಗಳ ಮೂಲ ಕಂಪನಿ ಮಾಲೀಕರು ಮಾಡಿಸಿದ್ದು, ಈ ಎಫ್‌ಐಆರ್‌ಗಳು ಎಸ್‌ಐಟಿಗೆ ವರ್ಗಾವಣೆಯಾಗಿದೆ.