ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Development Corporation Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬ್ಯಾಂಕ್ ಸಿಬ್ಬಂದಿಗೆ ಎಸ್‌ಐಟಿ ನೋಟಿಸ್ (SIT Notice) ನೀಡಿದೆ.
ಯೂನಿಯನ್ ಬ್ಯಾಂಕ್‌ನ ಮೂವರು ಸಿಬ್ಬಂದಿಗೆ ಎಸ್‌ಐಟಿ ನೋಟಿಸ್ ಕೊಟ್ಟಿದೆ. ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತ ರೌಲ್, ಬ್ಯಾಂಕ್ ಬ್ರಾಂಚ್ ಹೆಡ್ ದೀಪಾ ಎಸ್, ಕೃಷ್ಣಮೂರ್ತಿಗೆ ನೋಟಿಸ್ ನೀಡಲಾಗಿದೆ. ತುರ್ತಾಗಿ ವಿಚಾರಣೆಗೆ ಹಾಜರಾಗಲು ನೋಟಿಸ್ ಕೊಡಲಾಗಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ – ಸಿಎಂ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲಿ: ಎನ್.ರವಿಕುಮಾರ್ ಆಗ್ರಹ
Advertisement
Advertisement
ಸಿಬಿಐ ಬಳಿಕ ಇ.ಡಿ ಈ ಪ್ರಕರಣಕ್ಕೆ ಎಂಟ್ರಿಕೊಟ್ಟಿದ್ದು, ಯೂನಿಯನ್ ಬ್ಯಾಂಕ್ ನೀಡಿದ ದೂರಿನ ಮಾಹಿತಿ ಪಡೆದಿದೆ. ಸಿಬಿಐ ಬಳಿ ಇ.ಡಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ. ಹಣ ಅಕ್ರಮ ವರ್ಗಾವಣೆ (ಹವಾಲ) ನಡೆದಿರೋ ಶಂಕೆ ಹಿನ್ನೆಲೆ ಇ.ಡಿ ಮಾಹಿತಿ ಪಡೆದಿದ್ದು, ಸಿಬಿಐ ಬಳಿ ಎಫ್‌ಐಆರ್ ಬಗೆಗಿನ ಮಾಹಿತಿ ಪಡೆದಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ವಿಪಕ್ಷ ನಾಯಕ ಆಗಲಿ ಅನ್ನೋದು ನಮ್ಮೆಲ್ಲರ ಆಸೆ: ಜಿ.ಪರಮೇಶ್ವರ್
Advertisement
Advertisement
ಸಿಬಿಐ ಬಳಿಕ ಇ.ಡಿ ಎಫ್‌ಐಆರ್ ದಾಖಲಿಸುವ ಸಾಧ್ಯತೆಯಿದ್ದು, ಮುಂದಿನ ವಾರ ಎಫ್‌ಐಆರ್ ದಾಖಲು ಮಾಡಲು ತಯಾರಿ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ‘ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದೆ. ಈಗಾಗಲೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಇದನ್ನೂ ಓದಿ: ಗ್ಯಾರಂಟಿಗಳನ್ನು ಮತ ಪಡೆಯಲು ನೀಡಿಲ್ಲ, ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಿಸಲ್ಲ: ರಾಮಲಿಂಗಾ ರೆಡ್ಡಿ