ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Corporation Scam ) ಆಗಿರುವ ಬೃಹತ್ ಹಗರಣ, ಭ್ರಷ್ಟಾಚಾರದ ಸಂಬಂಧ ಸಿಎಂ (CM Siddaramaiah) ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಅವರು ಹೇಳಿದರು.
ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 3ರಂದು ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ವಿಜಯೇಂದ್ರ ನುಡಿದರು. ಇದನ್ನೂ ಓದಿ: ಜನಪ್ರಿಯ ವಾಹಿನಿಯಲ್ಲಿ ಧಾರಾವಾಹಿ ಆಯ್ತು ರೇಣುಕಾಸ್ವಾಮಿ ಮರ್ಡರ್
Advertisement
Advertisement
ಬಿಜೆಪಿ ತೀವ್ರ ಹೋರಾಟದ ಬಳಿಕ ಸಚಿವ ನಾಗೇಂದ್ರ (Nagendra ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಎಸ್‍ಐಟಿ ಇಲ್ಲಿನವರೆಗೆ ನಾಗೇಂದ್ರರನ್ನು ವಿಚಾರಣೆಗೆ ಒಳಪಡಿಸಿಲ್ಲ. ನಮ್ಮ ಹೋರಾಟದ ಮುಂದುವರೆದ ಭಾಗವಾಗಿ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ದದ್ದಲ್, ಅಷ್ಟೇ ಅಲ್ಲದೇ ಮಾನ್ಯ ಮುಖ್ಯಮಂತ್ರಿಗಳೂ ಅವರ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿದೆ ಎಂದು ವಿಜಯೇಂದ್ರ ಆಗ್ರಹಿಸಿದರು.
Advertisement
ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಹಣಕಾಸಿನ ಸಚಿವರಾಗಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರ ಗಮನಕ್ಕೆ ಬಾರದೇ ಇಷ್ಟು ದೊಡ್ಡ 187 ಕೋಟಿ ರೂ.ಗಳ ಹಗರಣ ನಡೆಯಲು ಅಸಾಧ್ಯ. ನಿನ್ನೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಿದೆ; ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗಿದೆ. ಈ ಹಗರಣದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆದಿದೆ. ಅಧಿಕಾರಿ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಡೆತ್ ನೋಟಿನಲ್ಲಿ ಹಲವಾರು ಅಂಶಗಳು ಇವೆ. ಆದರೆ ರಾಜ್ಯ ಸರಕಾರ ಈ ಪ್ರಕರಣವನ್ನು ಇನ್ನೂ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಟೀಕಿಸಿದರು.
Advertisement