ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಬಹುಕೋಟಿ ಹಗರಣ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಮಾಜಿ ಸಚಿವ ಬಿ.ಎನ್ ನಾಗೇಂದ್ರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬಂಧನವಾಗಿ 45 ದಿನಗಳು ಕಳೆದ ಬಳಿಕ ಜನಪ್ರತಿನಿಧಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
Advertisement
3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ:
ಇದೇ ಆಗಸ್ಟ್ 5ರಂದು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಪೊಲೀಸರು 12 ಮಂದಿ ಆರೋಪಿಗಳ ವಿರುದ್ಧ 3ನೇ ಎಸಿಎಂಎಂ ಕೋರ್ಟ್‌ನಲ್ಲಿ ಚಾರ್ಜ್ ಶೀಟ್ (Charge Sheet) ಸಲ್ಲಿಕೆ ಮಾಡಿದ್ದರು. ಇದನ್ನೂ ಓದಿ: Valmiki Corporation Scam | ಮತ್ತೆ 7.5 ಕೋಟಿ ಹಣ ಜಪ್ತಿ – ನಾಗೇಂದ್ರ ನ್ಯಾಯಾಂಗ ಬಂಧನ ವಿಸ್ತರಣೆ
Advertisement
Advertisement
ಈ ಹಿಂದೆ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಅಧಿಕಾರಿಗಳು ಪ್ರಥಮ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಈ ದೋಷಾರೋಪಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ (Nagendra), ಬಸನಗೌಡ ದದ್ದಲ್ (Basanagouda Daddal) ಅವರ ಹೆಸರನ್ನು ಕೈಬಿಡಲಾಗಿತ್ತು. ಇದನ್ನೂ ಓದಿ: Valmiki Scam | ಜೇಬು ತುಂಬಿಸಿದವರು ಎಷ್ಟು ಮಂದಿ? ಎಷ್ಟು ಹಣ ಹೋಗಿದೆ? ಚಿನ್ನ ಎಷ್ಟು ಸಿಕ್ಕಿದೆ?
Advertisement
ಸುಮಾರು 3,072 ಪುಟಗಳ ಚಾರ್ಜ್ ಶೀಟ್‌ನಲ್ಲಿ ಸತ್ಯನಾರಾಯಣ ವರ್ಮಾ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು. ತನಿಖೆ ವೇಳೆ ಸುಮಾರು 45 ಕೋಟಿ ರೂ. ಮೌಲ್ಯದ ನಗದು ಹಾಗೂ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿತ್ತು. ಇದನ್ನೂ ಓದಿ: Valmiki Scam | ಜೈಲಿಗೆ ಹೋಗೋ ಭಯಕ್ಕೆ ಚಂದ್ರಶೇಖರ್ ಆತ್ಮಹತ್ಯೆ