Valmiki Scam | ನಾಗೇಂದ್ರಗೆ ಬಿಗ್‌ ರಿಲೀಫ್‌ – ಜಾಮೀನು ಮಂಜೂರು

Public TV
1 Min Read
NAGENDRA

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಬಹುಕೋಟಿ ಹಗರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಸಚಿವ ನಾಗೇಂದ್ರಗೆ (Nagendra) ಜಾಮೀನು ಸಿಕ್ಕಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special MP/MLA Court) ನಿರೀಕ್ಷಣಾ ಜಾಮೀನು (Bail) ಮಂಜೂರು ಮಾಡಿದೆ. ಈ ಪ್ರಕಣಕ್ಕೆ ಸಂಬಂಧಿಸಿದಂತೆ ಜುಲೈ 12 ರಂದು ಜಾರಿ ನಿರ್ದೇಶನಾಲಯ (ED) ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ ಅವರನ್ನು ಬಂಧಿಸಿತ್ತು.

2 ಲಕ್ಷ ರೂ. ಬಾಂಡ್, ಎರಡು ಶ್ಯೂರಿಟಿ, ತನಿಖಾ ಸಂಸ್ಥೆಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕೆಂದು ಕೋರ್ಟ್‌ ಷರತ್ತು ವಿಧಿಸಿದೆ. ಇದನ್ನೂ ಓದಿ: Valmiki Scam | ಬಳ್ಳಾರಿ ಚುನಾವಣೆಗೆ ಹಣ ಬಳಕೆ – ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ

94 cr Valmiki corpn scam Union Bank files plaint with CBI suspends 3 officials

ಸದ್ಯ ಪರಪ್ಪನ ಅಗ್ರಹಾರದಲ್ಲಿ ನಾಗೇಂದ್ರ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಇಂದು ಸಂಜೆ ಕೋರ್ಟ್‌ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ನಾಳೆ ನಾಗೇಂದ್ರ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

ವಾಲ್ಮೀಕಿ ನಿಗಮದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಸ್ಪರ್ಧಿಸಿದ ಬಳ್ಳಾರಿ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ (B Nagendra) ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿತ್ತು.

ನಾಗೇಂದ್ರ ಅವರ ಸೂಚನೆ ಮೇರೆಗೆ ನಗದನ್ನು ನಿರ್ವಹಿಸುತ್ತಿದ್ದ ವಿಜಯ್ ಕುಮಾರ್ ಗೌಡ ಅವರ ಮೊಬೈಲ್ ಫೋನ್‌ನಿಂದ ಚುನಾವಣಾ ವೆಚ್ಚದ ವಿವರಗಳನ್ನು ಪಡೆಯಲಾಗಿದೆ. ಹಗರಣ ಬೆಳಕಿಗೆ ಬಂದ ನಂತರ ರಾಜೀನಾಮೆ ನೀಡಿದ ಬಿ.ನಾಗೇಂದ್ರ ಅವರು ತಮ್ಮ ಮೊಬೈಲ್ ಫೋನ್‌ಗಳನ್ನು ನಾಶಪಡಿಸಿದ್ದಾರೆ. ಅಷ್ಟೇ ಅಲ್ಲದೇ ಉಳಿದವರಿಗೆ ಈ ಪ್ರಕರಣದಲ್ಲಿ ಮೌನವಾಗಿರುವಂತೆ ಸೂಚನೆ ನೀಡಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇಡಿ ಹೇಳಿತ್ತು.

Share This Article