ರಾಯಚೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣ (Karnataka Maharshi Valmiki Scheduled Tribe Development Corporation Ltd) ಸಂಬಂಧ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹಾಗೂ ಎನ್.ಎಸ್.ಬೋಸರಾಜು ರಾಜೀನಾಮೆಗೆ ಒತ್ತಾಯ ಕೇಳಿ ಬಂದಿದೆ.
ರಾಯಚೂರಿನಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ವಿರೂಪಾಕ್ಷಿ ಈ ಇಬ್ಬರು ಕೂಡಲೇ ರಾಜಿನಾಮೆ ಕೊಡಬೇಕು ಅಂತ ಒತ್ತಾಯಿಸಿದ್ದಾರೆ. ಹಗರಣದಲ್ಲಿ ಶಾಸಕ ಬಸನಗೌಡ ದದ್ದಲ ಹಾಗೂ ತೆಲಂಗಾಣ ಚುನಾವಣಾ ಉಸ್ತುವಾರಿ ಎನ್.ಎಸ್. ಬೋಸರಾಜು ಪಾತ್ರದವಿದೆ ಅಂತ ಆರೋಪಿಸಿದ್ದಾರೆ.
Advertisement
Advertisement
187 ಕೋಟಿ ಹಗರಣದ ಹಿಂದೆ ಸಿಎಂ ಹಾಗೂ ಡಿಸಿಎಂ ಹಸ್ತ ಇದೆ. ಬಸನಗೌಡ ದದ್ದಲ ಭ್ರಷ್ಟಾಚಾರಕ್ಕೆ ಮೂಲ ಕಾರಣ. ಬಂಧನಕ್ಕೊಳಗಾದ ನಾಗರಾಜ ನೆಕ್ಕಂಟಿ, ನಾಗೇಶ್ವರ ಎನ್.ಎಸ್.ಬೋಸರಾಜು ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಎಸ್‌ಐಟಿ ಹಾಗೂ ಸಿಬಿಐ ಎನ್.ಎಸ್.ಬೋಸರಾಜು ಹಾಗೂ ದದ್ದಲ ಬಸನಗೌಡ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಇಬ್ಬರನ್ನೂ ವಿಚಾರಣೆಗೆ ಒಳಪಡಿಸಬೇಕು ಮತ್ತು ಬಂಧಿಸಬೇಕು ಅಂತ ಒತ್ತಾಯಿಸಿದ್ದಾರೆ.
Advertisement
ಕೆಲವರು ಪ್ರಕರಣ ದಾಖಲಾಗುತ್ತಿದ್ದಂತೆ ಹಣ ಹಿಂದಿರುಗಿಸಿದ್ದಾರೆ.ಹಣ ಹಿಂದಿರುಗಿಸುವಲ್ಲಿ ಶಾಸಕ ಬಸನಗೌಡ ದದ್ದಲ ಪಾತ್ರವಿದೆ ಅಂತ ಗಂಭೀರವಾಗಿ ಆರೋಪ ಮಾಡಿದ್ದಾರೆ. ಜೆಡಿಎಸ್ ನಿಯೋಗ ರಾಜ್ಯಪಾಲರನ್ನ ಭೇಟಿ ಮಾಡಿ ಮನವಿ ಪತ್ರ ಕೊಡುತ್ತಿದ್ದೇವೆ. ಇಡೀ ರಾಜ್ಯಾದ್ಯಂತ ಹಗರಣ ವಿರುದ್ದ ಹೋರಾಟ ಮಾಡುತ್ತೇವೆ ಅಂತ ರಾಯಚೂರು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರೂಪಾಕ್ಷಿ ಹೇಳಿದ್ದಾರೆ.