ಹುಬ್ಬಳ್ಳಿ: ಮೀಸಲಾತಿ ಹೆಚ್ಚಳದ ಘೋಷಣೆ ಇದೊಂದು ಐತಿಹಾಸಿಕ ನಿರ್ಧಾರ. ನಾನು ನಮ್ಮ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ವಾಲ್ಮೀಕಿ (Valmiki) ಬಿಟ್ಟು ರಾಮನಿಲ್ಲ (Rama). ರಾಮನನ್ನು ಬಿಟ್ಟು ವಾಲ್ಮೀಕಿ ಇಲ್ಲ. ರಾಮನ ವ್ಯಕ್ತಿತ್ವ ಜಗತ್ತಿಗೆ ತೋರಿಸಿದ್ದು, ರಾಮನನ್ನು ಆದರ್ಶ ಪುರುಷ ಎಂದು ತೋರಿಸಿದ್ದು ವಾಲ್ಮೀಕಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿಯ ವಾಲ್ಮೀಕಿ ಜಯಂತಿ ವಿಶೇಷವಾಗಿದೆ. ಪ್ರತಿ ವರ್ಷ ಮೀಸಲಾತಿ ಹೆಚ್ಚಿಸಲು ಬೇಡಿಕೆ ಇರುತ್ತಿತ್ತು. ಮೀಸಲಾತಿ ಹೆಚ್ಚಳ ಬಗ್ಗೆ ನಾಗಮೋಹನದಾಸ್ ವರದಿ ಕೊಟ್ಟಾಗಿನಿಂದ ಬೇಡಿಕೆ ಇತ್ತು. ಆದರೆ ಯಾವ ಸರ್ಕಾರವೂ ಮೀಸಲಾತಿ ಹೆಚ್ಚಳ ಮಾಡಲು ಧೈರ್ಯ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನವರು ನಿಷ್ಪಪ್ರಯೋಜಕ, ಅಪ್ರಯೋಜಕ ಅಂತ ನಾವು ಹೇಳೋದಿಲ್ಲ: ಪ್ರಹ್ಲಾದ್ ಜೋಶಿ ಲೇವಡಿ
ಬಸವರಾಜ್ ಬೊಮ್ಮಾಯಿ (Basavaraj Bommai) ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ. ಕೋರ್ ಕಮೀಟಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನವಾಗಿತ್ತು. ನಿನ್ನೆ ಸಂಪುಟದಲ್ಲಿ ಬಹಳ ದಿನದ ಬೇಡಿಕೆಗೆ ನಮ್ಮ ಸರ್ಕಾರ ಅಸ್ತು ಎಂದಿದೆ. ಹೀಗಾಗಿ ನಾನು ನಮ್ಮ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ. ಇದನ್ನೂ ಓದಿ: ಒಕ್ಕಲಿಗ ಮತ ಸೆಳೆಯಲು JDS ಮೇಲೆ ಚೆಲುವರಾಯಸ್ವಾಮಿ ಸಾಫ್ಟ್ ಕಾರ್ನರ್
Live Tv
[brid partner=56869869 player=32851 video=960834 autoplay=true]