– ಆಸ್ಪತ್ರೆ ಬೆಡ್, ಪೀಠೋಪಕರಣಗಳು ಉಡೀಸ್; 9 ಮಂದಿ ಅರೆಸ್ಟ್
ಕೋಲ್ಕತ್ತಾ: ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆ (Kolkata Hospital) ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ.
ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ನುಗ್ಗಿದ ಪ್ರತಿಭಟನಾಕಾರರು ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಅಲ್ಲದೇ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಇದನ್ನೂ ಓದಿ: ಬಾಂಗ್ಲಾ ಹಿಂಸಾಚಾರ – ಹಿಂದೂಗಳ ಸುರಕ್ಷತೆ ಬಗ್ಗೆ ಮೋದಿ ಕಳವಳ
ನಿನ್ನೆ ತಡರಾತ್ರಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದರು. ಲಾಠಿ ಚಾರ್ಜ್ ಕೂಡ ನಡೆಸಿದರು. ಆಸ್ಪತ್ರೆಯ ಆವರಣದ ಮೇಲೆ ಕಲ್ಲು ನಡೆಸಿದ್ದರು. ಕಲ್ಲೇಟಿಗೆ ಪೊಲೀಸರು ಗಾಯಗೊಂಡಿದ್ದಾರೆ. ಉದ್ರಿಕ್ತರ ಗುಂಪು ಆಸ್ಪತ್ರೆಗೆ ನುಗ್ಗಲು ಪ್ರಯತ್ನಿಸಿತು. ಆದರೆ ನಮ್ಮ ಪೊಲೀಸರು ತಡೆದಿದ್ದಾರೆ. ಈ ವೇಳೆ ತಡೆಯಲು ಮುಂದಾದ ಪೊಲೀಸರ ಮೇಲೂ ಹಲ್ಲೆಗೆ ಯತ್ನಿಸಿದ್ದರು.
ಆಸ್ಪತ್ರೆಯ ಹೊರಗೆ ಬೈಕ್‌ಗೆ ಬೆಂಕಿ ಹಚ್ಚಿಲಾಗಿದೆ. ಕನಿಷ್ಠ ಎರಡು ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಲಾಗಿದೆ. ಪ್ರತಿಭಟನೆಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ದಿನದ ಸಂಭ್ರಮ – ದೇಶಭಕ್ತಿ ಮೆರೆದ ಟೀಂ ಇಂಡಿಯಾ ಸ್ಟಾರ್ಸ್!
ದೇಶವನ್ನೇ ಬೆಚ್ಚಿಬೀಳಿಸುವ ಘಟನೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.