ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿ (Narendra Modi) ಹಾಗೂ ಅಮಿತ್ ಶಾ (AmitShah) ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
ನಿಷೇಧಿತ ಕೆ. ಎಫ್. ಡಿ ಮತ್ತು ಸಿಮಿ ಸಂಘಟನೆಗಳ ರೂಪಾಂತರಿಯೇ ಈ ಪಿ.ಎಫ್.ಐ. ಈ ದೇಶದ ಕಾನೂನು ಹಾಗೂ ಸಂವಿಧಾನದ ಮೇಲೆ ನಂಬಿಕೆಯಿಲ್ಲದ ಈ ಸಂಘಟನೆ, ವಿದೇಶಗಳಿಂದ ಬರುವ ಆಜ್ಞೆಯ ಪ್ರಕಾರ ಹಲವಾರು ವಿಧ್ವಂಸಕ ಚಟುವಟಿಕೆಯಲ್ಲಿ ಭಾಗಿಯಾಗಿದೆ.
1/2 pic.twitter.com/Eeeffbt38r
— Basavaraj S Bommai (@BSBommai) September 28, 2022
Advertisement
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂದರು.
Advertisement
ಈ ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇನೆ. ಈ ಮಹತ್ವದ ಕ್ರಮವನ್ನು ಕೈಗೊಂಡ ಪ್ರಧಾನಿ ಶ್ರೀ @narendramodi, ಕೇಂದ್ರ ಗೃಹ ಸಚಿವರಾದ ಶ್ರೀ @AmitShah ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
2/2
— Basavaraj S Bommai (@BSBommai) September 28, 2022
Advertisement
ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧಪಕ್ಷದವರೂ, ಸಿಪಿಐ (CPI), ಕಾಂಗ್ರೆಸ್ (Congress), ಸಿಪಿಎಂ (CPM) ಎಲ್ಲರೂ ಕೂಡ ಪಿಎಫ್‍ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.