ಮಂಗಳೂರು: ಸರ್ಕಾರದ ಅನುದಾನದ ದಾರಿ ನೋಡದೇ ಜಿಲ್ಲೆಯ ಪಾವೂರು ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಿಕೊಂಡಿದ್ದರು. ಇದೀಗ ಅದೇ ಸೇತುವೆಯನ್ನು ಕೆಲ ವಿಧ್ವಂಸಕರು ಧ್ವಂಸಗೊಳಿಸಿ ಅಟ್ಟಹಾಸ ಮೆರೆದಿದ್ದಾರೆ.
ಮಂಗಳೂರು ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಪಾವೂರು ಗ್ರಾಮಕ್ಕೆ ಒಳಪಡುವ ಉಳಿಯ, ನೇತ್ರಾವತಿ ನದಿಯ ಮಧ್ಯೆ ನೂರು ಎಕರೆಯಷ್ಟು ಇರುವ ಒಂದು ಸಣ್ಣ ಪ್ರದೇಶವಾಗಿದೆ. ಈ ದ್ವೀಪದಲ್ಲಿ ಸುಮಾರು 50 ಮನೆಗಳಿದ್ದು, 200ಕ್ಕೂ ಹೆಚ್ಚು ನಿವಾಸಿಗಳಿದ್ದಾರೆ. ಹತ್ತಾರು ವರ್ಷಗಳಿಂದ ಇಲ್ಲೊಂದು ಸೇತುವೆ ನಿರ್ಮಾಣ ಮಾಡಬೇಕೆಂದು ನಡೆಸಿಕೊಂಡು ಬಂದ ಹೋರಾಟಕ್ಕೆ ಬೆಲೆಯೇ ಸಿಕ್ಕಿರಿಲಿಲ್ಲ. ಇದರಿಂದ ಬೇಸತ್ತ ಸ್ಥಳೀಯರು ತಾವೇ ತಾತ್ಕಾಲಿಕ ಸೇತುವೆ ನಿರ್ಮಿಸಿಕೊಂಡಿದ್ದರು.
Advertisement
Advertisement
ನೇತ್ರಾವತಿ ನದಿ ದಡದಲ್ಲಿ ಅಕ್ರಮ ಮರಳುಗಾರಿಕೆಯ ಬಗ್ಗೆ ಗ್ರಾಮಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಸ್ವೀಕರಿಸಿದ ಪೊಲೀಸರು ಶುಕ್ರವಾರ ದಾಳಿ ನಡೆಸಿ 5 ಬೋಟ್ ಗಳನ್ನು ವಶಪಡಿಸಿಕೊಂಡಿದ್ದರು. ಇದನ್ನೂ ಓದಿ: ಸರ್ಕಾರದ ಭರವಸೆಯಿಂದ ಕಂಗೆಟ್ಟು ತಾವೇ ಹಣ ಸಂಗ್ರಹಿಸಿ ಸೇತುವೆ ನಿರ್ಮಿಸಿದ್ರು – ಸಚಿವರ ಕ್ಷೇತ್ರದ ಕಥೆ
Advertisement
ಗ್ರಾಮಸ್ಥರು ದೂರು ನೀಡಿದ್ದರಿಂದ ಪೊಲೀಸ್ ದಾಳಿ ನಡೆದಿದೆ ಎಂದು ತಿಳಿದ ಅಕ್ರಮ ಮರಳು ದಂಧೆಕೋರರು ಇತ್ತೀಚೆಗೆ ನಿರ್ಮಿಸಿದ್ದ ಸೇತುವೆಯನ್ನು ಧ್ವಂಸಗೊಳಿಸಿದ್ದಾರೆ. ಸೇತುವೆ ಬಳಿ ನಿಲ್ಲಿಸಿದ್ದ ಆಟೋ,ಬೈಕ್ ಗಳನ್ನು ಧ್ವಂಸಗೊಳಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv