ಚೆನ್ನೈ: ವಂಡಲೂರು ಮೃಗಾಲಯದಲ್ಲಿ 80 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮೃಗಾಲಯವನ್ನು ಮುಚ್ಚಲಾಗಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಸಿಬ್ಬಂದಿಯನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆಯಲ್ಲಿ 80 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಯಾರಿಗೂ ಯಾವುದೇ ರೋಗ ಲಕ್ಷಣಗಳಿಲ್ಲ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೃಗಾಲಯದ ನಿರ್ದೇಶಕರಾದ ವಿ.ಕರುಣಾಪ್ರಿಯಾ ತಿಳಿಸಿದ್ದಾರೆ. ಇದನ್ನೂ ಓದಿ: ಸರಳತೆ ಮೆರೆದ ನಿರ್ದೇಶಕ ಪ್ರೇಮ್- ಅಭಿಮಾನಿಗಳಿಂದ ಮೆಚ್ಚುಗೆ
Advertisement
Advertisement
ವಂಡಲೂರು ಮೃಗಾಲಯವನ್ನು ಜ.31ರವರೆಗೆ ಮುಚ್ಚಲಾಗುವುದು. ನಂತರ ಪರಿಸ್ಥಿತಿಯನ್ನು ಅವಲೋಕಿಸಿ ಮೃಗಾಲಯ ತೆರೆಯುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Advertisement
ತಮಿಳುನಾಡು ರಾಜ್ಯದಲ್ಲಿ ಶನಿವಾರ ಒಂದೇ ದಿನ 23,989 ಮಂದಿಯಲ್ಲಿ ಕೊರೊನಾ ಪತ್ತೆಯಾಗಿದ್ದು, ಸೋಂಕಿನಿಂದ 11 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,15,948 ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಮಲಯಾಳಂ ನಟ ಮಮ್ಮುಟ್ಟಿಗೆ ಕೋವಿಡ್-19 ಪಾಸಿಟಿವ್
Advertisement
ಚೆನ್ನೈನಲ್ಲಿ ನಿನ್ನೆ 8,989 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳದಿಂದಾಗಿ ರಾಜ್ಯದಲ್ಲಿ ಪ್ರತಿ ದಿನ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಪ್ರತಿ ಭಾನುವಾರ ಲಾಕ್‌ಡೌನ್ ಹೇರಲಾಗಿದೆ.