ಬೆಳಗಾವಿ: ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಹಾಗೂ ಶತಾಬ್ದಿ ಸೂಪರ್ ಫಾಸ್ಟ್ ರೈಲುಗಳ (Shatabdi Express) ವೇಳಾಪಟ್ಟಿ ಬದಲಾವಣೆಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ವಿ.ಸೋಮಣ್ಣ (V Somanna) ತಿಳಿಸಿದರು.
ರೈಲುಗಳ ವೇಳಾಪಟ್ಟಿಯ (Train Schedules) ಬಗ್ಗೆ ಪರಿಶೀಲಿಸಿ ಕ್ರಮ ವಹಿಸುವಂತೆ ರೈಲ್ವೆ ಮಂತ್ರಾಲಯವನ್ನು ಪತ್ರ ಮುಖೇನ ಕೋರಲಾಗಿದೆ. ರೈಲ್ವೆ ಅಧಿಕಾರಿಗಳು ಇದು ಕಷ್ಟ ಅನ್ನುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ರೈಲ್ವೆ ಸಚಿವರೊಂದಿಗೆ ಚರ್ಚಿಸಿ ಜನತೆಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಮದ್ಯಕ್ಕೆ ದಾಸರಾದ ದಂಪತಿ – ಮಗು ಸಾಕಲಾಗದೇ ಬಾಲಮಂದಿರದಲ್ಲಿ ಬಿಟ್ಟುಹೋದ್ರು
Advertisement
Advertisement
ವಿಧಾನ ಪರಿಷತ್ತಿನಲ್ಲಿ (Legislative Council) ಸದಸ್ಯ ಮರಿತಿಬ್ಬೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಂಡ್ಯದಲ್ಲಿ ಈ ಎರಡೂ ರೈಲುಗಳಿಗೂ ಸಹ ನಿಲುಗಡೆ ಒದಗಿಸಬೇಕೆಂಬ ಸದಸ್ಯರ ಕೋರಿಕೆಯ ಬಗ್ಗೆಯೂ ಅಗತ್ಯ ಕ್ರಮಕೈಗೊಳ್ಳುವಂತೆ ಮಂತ್ರಾಲಯಕ್ಕೆ ಪತ್ರದ ಮುಖೇನ ತಿಳಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ನನಗೆ, ನೇಹಾಗೆ ಕಾಂಪಿಟೇಶನ್ ಇತ್ತು: ಅನುಪಮಾ
Advertisement
Advertisement
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯು ಆರಂಭವಾದ ನಂತರ ಶತಾಬ್ದಿ ಹಾಗೂ ವಂದೇ ಭಾರತ್ ಎರಡು ರೈಲುಗಳಲ್ಲೂ ಬಹುತೇಕ ಪೂರ್ಣ ಪ್ರಮಾಣದಲ್ಲಿ ಪಯಾಣಿಕರು ಪ್ರಯಾಣಿಸುತ್ತಿದ್ದಾರೆ. ಆದ್ದರಿಂದ ಯಾವುದೇ ಆರ್ಥಿಕ ನಷ್ಟ ಉಂಟಾಗಿಲ್ಲ ಎಂದು ನೈರುತ್ಯ ರೈಲ್ವೆ ತಿಳಿಸಿರುವುದಾಗಿ ಸಚಿವರು ಸ್ಪಷ್ಟಪಡಿಸಿದರು.