ಹಾವೇರಿ: ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಿಂದಾಗಿ ಹಲವಾರು ಜಿಲ್ಲೆಗಳಲ್ಲಿ ಬರಗಾಲದ ಛಾಯೆ ಆವರಿಸಿದೆ. ಇನ್ನೂ ಹಾವೇರಿ (Haveri) ಜಿಲ್ಲೆಯ ಜೀವನದಿ ವರದಾ ನದಿಯ (Varada River) ಒಡಲು ಬರಿದಾಗುತ್ತಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೇ ಪರದಾಡುವ (Drinking Water Problem) ಪರಿಸ್ಥಿತಿ ನಿರ್ಮಾಣವಾಗಿದೆ.
Advertisement
ವರದಾ ನದಿಗೆ ನಿರ್ಮಿಸಲಾಗಿದ್ದ ಚೆಕ್ ಡ್ಯಾಂಗಳಲ್ಲೂ ನೀರು ಖಾಲಿಯಾಗಿದೆ. ಜಿಲ್ಲೆಯ 15 ಕ್ಕೂ ಅಧಿಕ ಚೆಕ್ ಡ್ಯಾಂಗಳು ನೀರಿಲ್ಲದೆ ಬರಿದಾಗಿವೆ. ವರದಾ ನದಿಯಿಂದ ದೇವಗಿರಿ, ಯಲ್ಲಾಪುರ ಮನ್ನಂಗಿ ಮತ್ತು ಮೇಳಗಟ್ಟಿಗೆ ಗ್ರಾಮಕ್ಕೆ ಕುಡಿಯುವ ನೀರಿನ ಯೋಜನೆ ಮೂಲಕ ನೀರನ್ನು ಗ್ರಾಮಗಳಿಗೆ ಒದಗಿಸಲಾಗುತ್ತಿತ್ತು. ಈಗ ವರದಾ ನದಿ ಸಂಪೂರ್ಣವಾಗಿ ಖಾಲಿಯಾಗಿದ್ದು ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇದನ್ನೂ ಓದಿ: ಮಸೀದಿ ಬಳಿಯಿರುವ ಭಗವಾಧ್ವಜ ತೆರವುಗೊಳಿಸಲು ಪ್ಲ್ಯಾನ್ ಆರೋಪ; ಮಾಜಿ ಶಾಸಕನ ವಿರುದ್ಧ ಕೇಸ್
Advertisement
Advertisement
ಇನ್ನೂ ರೈತರು ಕೃಷಿಗಾಗಿ ಪಂಪ್‍ಗಳನ್ನು ಬಳಸಿ ಇರುವ ನೀರನ್ನೂ ಖಾಲಿ ಮಾಡುತ್ತಿದ್ದಾರೆ. ಈಗಾಗಲೇ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದ್ದು, ಮುಂದಿನ ದಿನಗಳಲ್ಲಿ ಹನಿ ನೀರಿಗೂ ಪದದಾಡುವ ಪರಸ್ಥಿತಿ ನಿರ್ಮಾಣವಾಗುವ ಭೀತಿ ಕಾಡುತ್ತಿದೆ. ಇದನ್ನೂ ಓದಿ: ಸೋಮವಾರ ಕಲಬುರಗಿಗೆ ಅಶೋಕ್ – ಹತ್ಯೆಗೊಳಗಾದ ಬಿಜೆಪಿ ಮುಖಂಡರ ಕುಟುಂಬ ಸದಸ್ಯರ ಭೇಟಿ
Advertisement