ರಾಮನಗರ: ವರಮಹಾಲಕ್ಷ್ಮಿ ಹಬ್ಬವನ್ನು (Kabbalamma Temple) ನಾಡಿನೆಲ್ಲೆಡೆ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಕನಕಪುರದ (Kanakapura) ಕಬ್ಬಾಳಮ್ಮ ದೇವಿಗೆ (Kabbalamma Temple) ವಿವಿಧ ನೋಟುಗಳಿಂದ (Note) ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗಿದೆ.
ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿರುವ ಕಬ್ಬಾಳಮ್ಮ ದೇವಿಯನ್ನು ನೋಟಿನಿಂದ ಸಿಂಗಾರಗೊಳಿಸಲಾಗಿದೆ. ವಿವಿಧ ನೋಟುಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗಿದ್ದು, ದೇವಿ ಕಣ್ಮನ ಸೆಳೆದಿದ್ದಾಳೆ. ಇದನ್ನೂ ಓದಿ: ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ – ಲಕ್ಷ್ಮಿಯರಿಗೆ ದೇಗುಲದಲ್ಲಿ ಸಿಗಲಿದೆ ಸ್ಪೆಷಲ್ ಗಿಫ್ಟ್
ಹಬ್ಬದ ಹಿನ್ನೆಲೆ ದೇವಿಯ ದರ್ಶನಕ್ಕೆ ಮುಂಜಾನೆಯಿಂದ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: Chandrayaan-3 ಲ್ಯಾಂಡರ್ನಿಂದ ಚಂದ್ರನ ಮೇಲೆ ಇಳಿಯುತ್ತಿರುವ ರೋವರ್ – ವೀಡಿಯೋ ರಿಲೀಸ್ ಮಾಡಿದ ಇಸ್ರೋ
Web Stories