ಮಠ, ಎದ್ದೇಳು ಮಂಜುನಾಥ, ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ (Guruprasad) ಅವರು ಗಡ್ಡ ಶೇವ್ ಮಾಡದೇ ಇರಲು ಈ ಹಿಂದಿನ ಇಂಟರೆಸ್ಟಿಂಗ್ ವಿಚಾರವೊಂದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಅಷ್ಟಕ್ಕೂ ಗುರುಪ್ರಸಾದ್ ಅವರು ಗಡ್ಡವನ್ನು ಯಾಕೆ ಬಿಟ್ಟಿದ್ದರು ಎಂಬುದಕ್ಕೆ ಇಲ್ಲಿದೆ ಉತ್ತರ. ಇದನ್ನೂ ಓದಿ:ಗುರು ಆತ್ಮಹತ್ಯೆಗೆ ಅಸಲಿ ಕಾರಣ ಇನ್ನೂ ನಿಗೂಢ – ಮೊಬೈಲ್, ಟ್ಯಾಬ್ FSLಗೆ ಕಳಿಸಲು ತಯಾರಿ
Advertisement
ಗುರುಪ್ರಸಾದ್ ಗಡ್ಡ ಶೇವ್ ಮಾಡದೇ ಇರಲು ಡಾ.ರಾಜ್‌ಕುಮಾರ್ ಕಾರಣವಂತೆ. ವರನಟ ರಾಜ್‌ಕುಮಾರ್ (Senior Actor Rajkumar) ಅವರನ್ನು ಭೇಟಿಯಾದ ಸಮಯದಲ್ಲಿ ನನ್ನ ಗಡ್ಡವನ್ನು ಮುಟ್ಟಿ ಎಷ್ಟು ಚೆನ್ನಾಗಿದೆ ಎಂದು ಹೇಳಿದ್ದರು. ಅವರು ಮುಟ್ಟಿದ ಗಡ್ಡವನ್ನು ಮುಟ್ಟಿ ಅಲ್ಲಿದ್ದ ಅಭಿಮಾನಿಗಳು ಮುಟ್ಟಿ ಖುಷಿಪಟ್ಟಿದ್ದರು. ಡಾ.ರಾಜ್‌ಕುಮಾರ್ ಅವರು ಈ ಗಡ್ಡವನ್ನು ಮುಟ್ಟಿದ್ದರು ಎನ್ನುವ ಕಾರಣಕ್ಕೆ ಅದನ್ನು ಅವತ್ತಿನಿಂದಲೂ ಶೇವ್ ಮಾಡಿಲ್ಲ ಎಂದು ಗುರುಪ್ರಸಾದ್ ಸಾಕಷ್ಟು ಬಾರಿ ಹಲವು ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.
Advertisement
Advertisement
ಅಂದಹಾಗೆ, ಆತ್ಮಹತ್ಯೆಗೆ ಶರಣಾಗಿದ್ದ ಡೈರೆಕ್ಟರ್ ಗುರುಪ್ರಸಾದ್ ಅವರ ಅಂತ್ಯಕ್ರಿಯೆ ನವೆಂಬರ್ 3ರಂದು ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಬ್ರಾಹ್ಮಣ ಪದ್ಧತಿಯಂತೆ ನಡೆಯಿತು. ಅವರ ಅಂತ್ಯಕ್ರಿಯೆಗೂ ಮುನ್ನ ಅಂತಿಮ ದರ್ಶನ ಪಡೆಯಲು ಡಾಲಿ, ಯೋಗರಾಜ್ ಭಟ್, ದುನಿಯಾ ವಿಜಯ್, ನೀನಾಸಂ ಸತೀಶ್ ಸೇರಿದಂತೆ ಅನೇಕರು ಆಗಮಿಸಿದ್ದರು.
Advertisement
1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್ ರಾಮಚಂದ್ರ ಶರ್ಮಾ 2006 ರಲ್ಲಿ ತೆರೆಕಂಡ ‘ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿಪಯಣ ಆರಂಭಿಸಿದರು. ಇದು ನವರಸ ನಾಯಕ ಜಗ್ಗೇಶ್‌ರ 100ನೇ ಚಿತ್ರ. 2009 ರಲ್ಲಿ ಇದೇ ಜೋಡಿ ‘ಎದ್ದೇಳು ಮಂಜುನಾಥ’ ಚಿತ್ರದ ಮೂಲಕ ಮತ್ತೊಂದು ಸಮಾಜಿಕ ಚಿತ್ರ ನೀಡಿತು. ಈ ಚಿತ್ರಕ್ಕೆ ಫಿಲ್ಮಫೇರ್ ಪ್ರಶಸ್ತಿ ದೊರಕಿತು. ನಂತರ ‘ಡೈರೆಕ್ಟರ್ ಸ್ಪೇಷಲ್’,’ಎರಡನೇ ಸಲ’ ಚಿತ್ರಗಳನ್ನು ನಿರ್ದೇಶಿಸಿದರು. ನಿರ್ದೇಶಕ ಮಾತ್ರವಲ್ಲದೇ ನಟನಾಗಿ ‘ಮಠ’, ‘ಎದ್ದೇಳು ಮಂಜುನಾಥ’,’ಮೈಲಾರಿ’, ‘ಹುಡುಗರು’,’ಅನಂತು v/s ನುಸ್ರತ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.
ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್‌ಬಾಸ್ ಅವತರಣಿಕೆಯಲ್ಲಿ ಭಾಗವಹಿಸಿದ್ದ ಇವರು ಹಲವು ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ.