ಇಂದಿನಿಂದ 15 ದಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

Public TV
2 Min Read
NAMMA METRO 4

ಬೆಂಗಳೂರು: ನಗರದ ನೇರಳೆ ಮಾರ್ಗದ (Purple Line) ಮೆಟ್ರೋ (Bengaluru Metro) ಸೇವೆಯಲ್ಲಿ ಇಂದಿನಿಂದ 15 ದಿನಗಳವರೆಗೆ ವ್ಯತ್ಯಯವಾಗಲಿದೆ. ಇಂದು ಕೆಂಗೇರಿ ಹಾಗೂ ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲುಗಳು ಸಂಚರಿಸುತ್ತಿಲ್ಲ.

ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ, ಬೈಯಪ್ಪನಹಳ್ಳಿ ಹಾಗೂ ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವಿನ ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆ ನಡೆಯಲಿರುವ ಕಾರಣ 15 ದಿನಗಳವರೆಗೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ರವರೆಗೆ ರೈಲು ಸೇವೆ ಲಭ್ಯವಿರಲಿದೆ.

bmrcl 1

ಯಾವ ದಿನ, ಯಾವ ಸಮಯ ವ್ಯತ್ಯಯ?
ಆಗಸ್ಟ್ 17:
ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ರವರೆಗೆ ರೈಲು ಸೇವೆ ಲಭ್ಯವಿರಲಿದೆ.

ಆಗಸ್ಟ್ 23 ಮತ್ತು 24:
ಕೆಂಗೇರಿ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆಯವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ಈ ವೇಳೆ ಮೈಸೂರು ರಸ್ತೆ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ. ಬೆಳಗ್ಗೆ 7 ಗಂಟೆ ನಂತರ ಕೆಂಗೇರಿಯಿಂದ ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ. ಇದನ್ನೂ ಓದಿ: ಬೆಂಗಳೂರಿನಲ್ಲೊಂದು ವಿಚಿತ್ರ ಘಟನೆ- ಬಾಡಿಗೆದಾರನನ್ನ ಗಮನಿಸದೇ ಮನೆ ಸೀಜ್

METRO

ಆಗಸ್ಟ್ 20 ರಿಂದ 29:
ಬೈಯಪ್ಪನಹಳ್ಳಿ ಟರ್ಮಿನಲ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ (ಕಾಡುಗೋಡಿ) ಮಾರ್ಗಗಳ ನಡುವೆ ಬೆಳಗ್ಗೆ 7 ಗಂಟೆಯವರೆಗೆ ಮೆಟ್ರೋ ಸೇವೆ ಸ್ಥಗಿತವಿರಲಿದೆ. ಈ ಅವಧಿಯಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ.

ಆಗಸ್ಟ್ 23 ಮತ್ತು 24:
ಬೆಳಗ್ಗೆ 5 ರಿಂದ 7 ಗಂಟೆಯವರೆಗೆ ಮೈಸೂರು ರಸ್ತೆ ನಿಲ್ದಾಣದಲ್ಲಿ ರೈಲು ಸೇವೆ ಕೊನೆಗೊಳ್ಳುವುದು. ಇನ್ನುಳಿದ ದಿನಗಳಲ್ಲಿ ರೈಲು ಸೇವೆ ಕೆಂಗೇರಿ ನಿಲ್ದಾಣದವರೆಗೆ ಲಭ್ಯವಿರಲಿದೆ. ಇದನ್ನೂ ಓದಿ: ಕರುನಾಡ ಮಂದಿಗೆ ಮತ್ತೊಂದು ಶಾಕ್- ಬೇಳೆ, ತರಕಾರಿ ಬಳಿಕ ಅಕ್ಕಿ ಬೆಲೆಯೂ ದುಬಾರಿ

ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article