ಕನ್ನಡದ ಚಸ್ಮಾ ಸುಂದರಿ ಸಾನ್ವಿ ಅಲಿಯಾಸ್ ರಶ್ಮಿಕಾ ಮಂದಣ್ಣ(Rashmika Mandanna), ಇದೀಗ ಸೌತ್ ಮತ್ತು ನಾರ್ತ್ ಇಂಡಸ್ಟ್ರಿಯಲ್ಲಿ ಮಿರ ಮಿರ ಅಂತಾ ಮಿಂಚ್ತಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬಹುಬೇಡಿಕೆಯ ನಾಯಕಿಯಾಗಿ ಚಾನ್ಸ್ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸದ್ಯ `ವಾರಿಸು’ (Varisu) ಸಿನಿಮಾಗಾಗಿ ವಿಜಯ್ ಜೊತೆ ಸೊಂಟ ಬಳುಕಿಸಿದ್ದಾರೆ.
ಪ್ಯಾನ್ ಇಂಡಿಯಾ ಸಿನಿಮಾ `ಪುಷ್ಪ'(Pushpa) ಶ್ರೀವಲ್ಲಿಯಾಗಿ ಗೆದ್ದಿರುವ ರಶ್ಮಿಕಾ ಮಂದಣ್ಣ, ಸದ್ಯ `ವಾರಿಸು'(Varisu) ಚಿತ್ರದ ವಿಷ್ಯವಾಗಿ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದ್ದಾರೆ. ಸೂಪರ್ ಸ್ಟಾರ್ ವಿಜಯ್ ಜೊತೆ ನಟಿಸಬೇಕು ಎಂಬುದು ರಶ್ಮಿಕಾ ಕನಸಾಗಿತ್ತು. ಅದೀಗ ನನಸಾಗಿದೆ. ವಿಜಯ್‌ಗೆ(Vijay) ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಚಿತ್ರದ ಹಾಡೊಂದು ರಿಲೀಸ್ ಆಗಿದ್ದು, ವಿಜಯ್ ಜೊತೆ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ಇದನ್ನೂ ಓದಿ:ದೈವ ನರ್ತಕರಿಗೆ ಸರ್ಕಾರ ಮಾಸಾಶನ ನೀಡಬಾರದಿತ್ತು – ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್
`ವಾರಿಸು’ ಚಿತ್ರದ ರಂಜಿತಮೆ ಸಾಂಗ್‌ಗೆ ಫ್ಯಾನ್ಸ್ ಬೋಲ್ಡ್ ಆಗಿದ್ದಾರೆ. ವಿಜಯ್ ಜೊತೆ ಹಾಟ್ ಆಗಿ ಕಾಣಿಸಿಕೊಂಡು ರಶ್ಮಿಕಾ ಸೊಂಟ ಬಳುಕಿಸಿರೋದು ಫ್ಯಾನ್ಸ್‌ಗೆ ಖುಷಿಕೊಟ್ಟಿದೆ. ಸಾಂಗ್ ರಿಲೀಸ್ ಆಗಿ ಕೆಲವೇ ಗಂಟೆಗಳಲ್ಲಿ ಮಿಲಿಯನ್ ಗಟ್ಟಲ್ಲೇ ವೀಕ್ಷಣೆ ಪಡೆದಿದೆ.
View this post on Instagram
`ಪುಷ್ಪ’ ಚಿತ್ರದಲ್ಲಿ ರಶ್ಮಿಕಾ ಹೆಜ್ಜೆ ಹಾಕಿದ್ದ ಸಾಮಿ ಸಾಂಗ್ ಭರ್ಜರಿ ಹಿಟ್ ಆಗಿತ್ತು. ಇದೀಗ `ವಾರಿಸು’ ಚಿತ್ರದ ಸಾಂಗ್‌ಗೆ ಅದ್ಬುತ ರೆಸ್ಪಾನ್ಸ್ ಸಿಗುತ್ತಿದೆ. ಇನ್ನೂ ಈ ಸಿನಿಮಾ 2023ರಲ್ಲಿ ತೆರೆಗೆ ಅಪ್ಪಳಿಸಲಿದೆ.