– ಶ್ವೇತಾ ಹೀಗೆ ಮಾಡ್ತಾಳೆಂದು ನನಗೆ ಗೊತ್ತಿಲ್ಲ ಎಂದ ಮಾಜಿ ಸಚಿವ
ಬೆಂಗಳೂರು: ವಂಚನೆ ಕೇಸ್ನಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ (Varthur Prakash) ವಿಚಾರಣೆ ಬಳಿಕ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ವರ್ತೂರು ಪ್ರಕಾಶ್, ಎಸಿಪಿ ಗೀತಾ ಎದುರು ವಿಚಾರಣೆ (Police Inquiry) ಎದುರಿಸಿದ್ದಾರೆ. ಇದೇ ವೇಳೆ ಆರೋಪಿ ಶ್ವೇತಾ ಗೌಡ (Shweta Gowda) ಕೊಟ್ಟಿದ್ದ ಗಿಫ್ಟ್ಗಳನ್ನ ಅಂದ್ರೆ ನಗದು, ಚಿನ್ನಾಭರಣ ಎಲ್ಲವನ್ನೂ ಪೊಲೀಸರಿಗೆ ವಾಪಸ್ ಕೊಟ್ಟಿದ್ದಾರೆ. ಒಟ್ಟು 12.50 ಲಕ್ಷ ರೂ. ನಗದು, ಮೂರು ಬ್ರಾಸ್ ಲೆಟ್, 1 ಚಿನ್ನದ ಉಂಗುರವನ್ನ ಎಸಿಪಿ ಗೀತಾ ಎದುರಿಗೇ ಪೊಲೀಸರಿಗೆ ಒಪ್ಪಿಸಿದ್ದಾರೆ.
Advertisement
Advertisement
ಶ್ವೇತಾ ಗೌಡ ಹೀಗೆ ಮಾಡ್ತಾಳೆಂದು ನನಗೆ ಗೊತ್ತಿಲ್ಲ, ನನಗೂ ಶ್ವೇತಗೌಡಳಿಗೂ ಯಾವುದೇ ಸಂಬಂಧವಿಲ್ಲ. ಗಿಫ್ಟ್ ಅಂತ ನನಗೆ ಆಕೆ ಕೆಲ ಒಡವೆ ನೀಡಿದ್ಲು ಎಂದು ಪೊಲೀಸರಿಗೆ ಜವಾಬು ನೀಡಿದ್ದಾರೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ: ದೆಹಲಿ ಹೈಕೋರ್ಟ್
Advertisement
Advertisement
ವಿಚಾರಣೆ ಬಳಿಕ ಮಾತನಾಡಿದ ವರ್ತೂರ್ ಪ್ರಕಾಶ್, ನನಗೆ ಆಕೆ ಸ್ನೇಹಿತೆ ಅಲ್ಲ. ಐದಾರು ತಿಂಗಳ. ಹಿಂದೆ ಪರಿಚಯ ಆಗಿದೆ. ನನ್ನ ಹೆಸರು ಬಳಸಿಕೊಂಡು ಚಿನ್ನಭಾರಣ ಖರೀದಿ ಮಾಡಿಕೊಂಡಿದ್ದಾಳೆ. ನನಗೂ ಮನಸ್ಸಿಗೆ ನೋವಾಗಿದೆ. ಚಿನ್ನದ ಅಂಗಡಿಯವರು 2 ಕೋಟಿ ರೂ. ಚಿನ್ನಭಾರಣ ಕೊಟ್ಟಿದ್ದಾರೆ, ಅದ್ಹೇಗೆ ಕೊಟ್ರು ಗೊತ್ತಿಲ್ಲ. ನನ್ನ ತರ ಕೆಲ ರಾಜಕಾರಣಿಗಳು ಹೆಸರು, ಫೋಟೋ ತೆಗೆದುಕೊಂಡು ವಂಚನೆ ಮಾಡಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಎಲ್ಲಾ ಮಾಹಿತಿ ಕೊಟ್ಟಿದ್ದೀನಿ ಎಂದು ಸ್ಪಷ್ಟಪಡಿಸಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಮೀಟ್:
ವಂಚಕಿ ಶ್ವೇತಾ ವಿಚಾರಣೆ ವೇಳೆ ಹಲವು ಸ್ಪೋಟಕ ಮಾಹಿತಿಗಳು ಬಹಿರಂಗವಾಗಿದೆ. ಶ್ವೇತಾಗೌಡ ಹಾಗೂ ವರ್ತೂರು ಪ್ರಕಾಶ್ಗೆ ನಿಕಟ ನಂಟಿರುವುದು ಪತ್ತೆಯಾಗಿದೆ. ಇಬ್ಬರೂ ಹಲವು ಬಾರಿ ಚಾಮುಂಡಿ ಬೆಟ್ಟಕ್ಕೆ ಹೋಗಿ ಬಂದಿದ್ದಾರೆ. ಅಲ್ಲದೇ ತಿರುಪತಿಗೆ ಹೋಗಲು ಸಹ ಟಿಕೆಟ್ ಬುಕ್ ಮಾಡಿರುವುದು ಬಹಿರಂಗವಾಗಿದೆ. ಇದಕ್ಕೆ ಪೂರಕವಾಗಿ ಶ್ವೇತಾ ಮೊಬೈಲ್ನಲ್ಲಿ ಹಲವು ಫೋಟೋ ಸಾಕ್ಷ್ಯಗಳು ಸಿಕ್ಕಿವೆ. 3 ಚಿನ್ನದ ಅಂಗಡಿ ಮಾಲೀಕರ ಜ್ಯುವೆಲ್ಲರಿ ಶಾಪ್ಗೆ ಶ್ವೇತಾ ಜೊತೆ ವರ್ತೂರು ಪ್ರಕಾಶ್ ಹೋಗಿರುವುದಕ್ಕೆ ಸಾಕ್ಷಿ ಸಿಕ್ಕಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಶಿವಣ್ಣಗೆ ಇಂದು ಶಸ್ತ್ರಚಿಕಿತ್ಸೆ – ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ಪೂಜೆ
ಗುಲಾಬ್ ಜಾಮೂನ್ ಅಂತ ನಂಬರ್ ಸೇವ್:
6 ತಿಂಗಳ ಹಿಂದೆಯಷ್ಟೇ ಶ್ವೇತಾ, ವರ್ತೂರು ಪ್ರಕಾಶ್ಗೆ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದಳು, ತಾನೇ ರಿಕ್ವೆಸ್ಟ್ ಕಳಿಸಿ ಸ್ನೇಹದ ಬಲೆಗೆ ಬೀಳಿಸಿಕೊಂಡಿದ್ದಳು. ಬಳಿಕ ಮೆಸೆಂಜರ್ನಲ್ಲಿ ಚಾಟಿಂಗ್ ಶುರುವಾಗಿ ಇಬ್ಬರೂ ಮೊಬೈಲ್ನಂಬರ್ ವಿನಿಮಯ ಮಾಡಿಕೊಂಡಿದ್ದಾರೆ. ಬಳಿಕ ವಾಟ್ಸಪ್ನಲ್ಲೂ ಚಾಟಿಂಗ್ ಮುಂದುವರಿದಿದೆ. ಶ್ವೇತಾ ವರ್ತೂರು ಪ್ರಕಾಶ್ ನಂಬರ್ ಅನ್ನು ಗುಲಾಬ್ ಜಾಮೂನ್ ಎಂಬ ಹೆಸರಿನಿಂದ ಸೇವ್ ಮಾಡಿಕೊಂಡಿದ್ದಳು ಅನ್ನೋ ವಿಚಾರವೂ ತನಿಖೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕೋಲ್ಕತ್ತಾ ರೇಪ್ & ಮರ್ಡರ್ ಕೇಸ್ | ಘಟನಾ ಸ್ಥಳದಲ್ಲಿ ಪ್ರತಿರೋಧದ ಪುರಾವೆ ಇಲ್ಲ – ಸಿಬಿಐಗೆ CFSL ವರದಿ ಸಲ್ಲಿಕೆ
ಆತ್ಮೀಯತೆ ಮುಂದುವರಿದ ನಂತರ ಶ್ವೇತಾ ಬಳಿಯೇ ವರ್ತೂರು ಪ್ರಕಾಶ್ 10 ಲಕ್ಷ ರೂ. ಸಾಲ ಪಡೆದುಕೊಂಡಿದ್ದಾರೆ ಅನ್ನೋ ಆರೋಪವೂ ಶ್ವೇತಾಳಿಂದ ಕೇಳಿಬಂದಿದೆ. ಮೂರು ಬ್ರೇಸ್ಲೆಟ್, ಒಂದು ಉಂಗುರ ಸೇರಿ, ಬ್ಯಾಂಕ್ ಖಾತೆಗೆ 10 ಲಕ್ಷ ರೂ. ಹಾಕಿಸಿಕೊಂಡಿದ್ದರಂತೆ, ತಿರುಪತಿಗೆ ಹೋಗಲು ಶ್ವೇತಾ ಜೊತೆ ಟಿಕೆಟ್ ಕೂಡ ಬುಕ್ ಮಾಡಿದ್ದರಂತೆ, ಟಿಕೆಟ್ ಬುಕ್ ಮಾಡಿದ್ದ ಫೋಟೋ ಸಹ ಲಭ್ಯವಾಗಿದೆ. ಹೀಗೆ ಇಬ್ಬರೂ ಸೇರಿ ಕೋಟ್ಯಂತರ ರೂ. ವಂಚನೆ ಮಾಡಿದ್ದಾರೆ ಎಂಬ ಆರೋಪ ಬಹಿರಂಗವಾಗಿದೆ.