ಕು ಡ್ಲದ ಬೆಡಗಿ ಪೂಜಾ ಹೆಗ್ಡೆ ಸದ್ಯ ವರುಣ್ ಧವನ್ (Varun Dhawan) ಜೊತೆಗಿನ ಸಿನಿಮಾ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ನಡುವೆ ವರುಣ್ ಜೊತೆ ಪೂಜಾ (Pooja Hegde) ಉತ್ತರಾಖಂಡದ ಋಷಿಕೇಶನಲ್ಲಿ ಗಂಗಾ ಆರತಿ ಮಾಡಿದ್ದಾರೆ. ಈ ಕುರಿತು ನಟಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ‘ನಿನ್ನ ಪ್ರತಿಯೊಂದು ಹೆಜ್ಜೆಯಲ್ಲೂ ನನ್ನ ಪಾಲಿರಲಿ’ ಎನ್ನುತ್ತಿದ್ದಾರೆ ಸಪ್ತಮಿ ಗೌಡ
ಹೊಸ ಸಿನಿಮಾದ ಶೂಟಿಂಗ್‌ಗಾಗಿ ಋಷಿಕೇಶಗೆ ಚಿತ್ರತಂಡ ತೆರಳಿದೆ. ಈ ವೇಳೆ, ಋಷಿಕೇಶನಲ್ಲಿರುವ ಗಂಗಾ ನದಿಯ ಬಳಿ ವರುಣ್ ಮತ್ತು ಪೂಜಾ ಗಂಗಾ ಆರತಿ ಮಾಡಿ ಪ್ರಾರ್ಥನೆ ಮಾಡುತ್ತಾರೆ. ಸಿನಿಮಾ ಯಶಸ್ಸಿಗಾಗಿ ಸಲ್ಲಿಸಿದ್ದಾರೆ. ಈ ಮೂಲಕ ಸಿನಿಮಾಕ್ಕೆ ಚಿತ್ರತಂಡ ಚಾಲನೆ ನೀಡಿದೆ.
ಈ ಪೋಸ್ಟ್ ಅನ್ನು Instagram ನಲ್ಲಿ ವೀಕ್ಷಿಸಿ
ಅಂದಹಾಗೆ, ವರುಣ್ ತಂದೆ ಡೇವಿಡ್ ಧವನ್ ನಿರ್ದೇಶನದ ‘ಹೇ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾದಲ್ಲಿ ಪೂಜಾ ನಾಯಕಿಯಾಗಿದ್ದಾರೆ. ತೆಗೆದುಕೊಳ್ಳುವ ಸಿನಿಮಾದ ಶೂಟಿಂಗ್ ಭರದಿಂದ ನಡೆಯುತ್ತಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಚಿತ್ರತಂಡ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ.
ಈ ಮುನ್ನ ವರುಣ್ ಅವರು ಕೀರ್ತಿ ಸುರೇಶ್ ಜೊತೆ ‘ಬೇಬಿ ಜಾನ್’ ಸಿನಿಮಾದಲ್ಲಿ ನಟಿಸಿದರು. ಇತ್ತ ಪೂಜಾ ಅವರು ಶಾಹಿದ್ ಕಪೂರ್‌ಗೆ ನಾಯಕಿಯಾಗಿ ‘ದೇವ’ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.